ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ: ಕಾರ್ಯಕರ್ತರ ಬಂಧನ


ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ1: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಬಿಜೆಪಿ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿತು.
ಶನಿವಾರ ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಚಿವ ನಾಗೇಂದ್ರ ಈ ಕೂಡಲೇ ರಾಜೀನಾಮೆ ನೀಡಬೇಕು ನಿಷ್ಪಕ್ಷಪಾತ ತನಿಖೆಯ ಮೂಲಕ ಅವ್ಯವಹಾರವನ್ನು ಬಯಲಿಗೆಳೆದು ಶಿಕ್ಷೆವಿಧಿಸಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಡೆತ್ ನೋಟ್ ನಲ್ಲಿ ಸಚಿವರ ಹೆಸರು ಉಲ್ಲೇಖ ಮಾಡಿದ್ದಾರೆ, ಈ ಕೂಡಲೇ ಸಚಿವ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು ಮತ್ತು ರಾಜ್ಯ ಸರ್ಕಾರದ ದೋರಣೆಯನ್ನು ಖಂಡಿಸಿ ಬಲವಂತವಾಗಿ ರಸ್ತೆ ತಡೆಯಲು ಮುಂದಾದ ಕಾರ್ಯಕರ್ತರನ್ನು ಬಂಧಿಸಿದರು.
ಕಿಚಡಿ ಕೊಟ್ರೇಶ, ಅಡವಿಸ್ವಾಮಿ,  ಸಚ್ಚಿನಕುಮಾರ, ಜಗದೇಶ ಕಾಮಟಗಿ, ದ್ವಾರಕೀಶ್, ಸೂರಿ ಬಂಗಾರ, ಚನ್ನವೀರ ಬದ್ರಿಕಟ್ಟಿ, ಶ್ರೀಕಾಂತ್ ಪೂಜಾರ  ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದರು.