ಸಚಿವ ಪೊಕ್ರಿಯಾಲ್ ಆಸ್ಪತ್ರೆಗೆ ದಾಖಲು

ನವದೆಹಲಿ, ಜೂ,೧- ಕೊರೊನೊತ್ತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಕ್ರಿಯಾಲ್ ಅವರನ್ನು ಅವರನ್ನು ಇಲ್ಲಿನ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲು ಮಾಡಲಾಗಿದೆ.
ಏ.೨೧ರಂದು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಆಗ ವರದಿ ಪಾಸಿಟಿವ್ ಬಂದಿತ್ತು. ಆಗ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ ಬಳಿಕ ಸಚಿವರು ಕೆಲಸಕ್ಕೆ ಹಾಜರಾಗಿದ್ದರು.
ಸಿಬಿಎಸ್‌ಇ ೧೨ ನೇ ತರಗತಿಗೆ ಪರೀಕ್ಷೆ ನಡೆಸುವ ಸಂಬಂಧ ಶಿಕ್ಷಣ ಸಚಿವರು ತಮ್ಮ ನಿರ್ಧಾರವನ್ನು ಪ್ರಕಟಿಸಿಬೇಕಾಗಿತ್ತು. ಇದರ ಬೆನ್ನಲ್ಲೆ ೬೧ ವರ್ಷದ ಪೊಕ್ರಿಯಾಲ್ ಆಸ್ಪತ್ರೆಗೆ ದಾಖಲಾಗಿರುವುದು ಭೀತಿಗೆ ಕಾರಣವಾಗಿದೆ.
ಇತ್ತೀಚೆಗೆ ಸಿಬಿಎಸ್‌ಇ ೧೨ ನೇ ತರಗತಿಗೆ ಪರೀಕ್ಷೆ ನಡೆಸುವ ಕುರಿತು ಎಲ್ಲ ರಾಜ್ಯಗಳ ಶಿಕ್ಷಣ ಸಚಿವ ಜತೆ ವೀಡಿಯೋ ಸಂವಾದ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದರು.
ಸಭೆಯಲ್ಲಿ ಬಹುತೇಕ ಸಚಿವರು ಪರೀಕ್ಷೆ ನಡೆಸಲು ಒಲವು ವ್ಯಕ್ತಪಡಿಸಿದ್ದರು. ಆದರೆ ಪರೀಕ್ಷೆ ಆರಂಭಕ್ಕೆ ಮುನ್ನ ವಿದ್ಯಾರ್ಥಿಗಳಿಗೆ ಮೊದಲ ಸುತ್ತಿನ ಲಸಿಕೆ ನೀಡುವಂತೆಯೂ ಕೇಂದ್ರದ ಮೇಲೆ ಒತ್ತಡ ಹೇರಿದ್ದರು.