ಸಚಿವ ಪ್ರಭು ಚವ್ಹಾಣರಿಂದ ಚಿತ್ರಸಂತೆ ಉದ್ಘಾಟನೆ

ಬೀದರ:ಮಾ.16:ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ಮಾರ್ಚ್ 15ರಂದು ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಚಿತ್ರಸಂತೆಯನ್ನು ಸ್ವಾಗತ ಸಮಿತಿಯ ಅಧ್ಯಕ್ಷರೂ ಆಗಿರುವ ಪಸು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಉದ್ಘಾಟಿಸಿದರು.

ಇದೇ ವೇಳೆ ನಾಡಿನ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಚಿತ್ರಕಲಾವಿದರು ಪ್ರದರ್ಶನಕ್ಕೆ ಇಟ್ಟಿದ್ದ ಚಿತ್ರಗಳನ್ನು ವೀಕ್ಷಿಸಿ ಸಂತೋಷಟ್ಟರು. ಚಿತ್ರವೊಂದನ್ನು ಖರೀದಿಸುವ ಮೂಲಕ ಚಿತ್ರಕಲಾವಿದರಿಗೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ ನಾಗಮಾರಪಳ್ಳಿ, ಸ್ವಾಗತ ಸಮಿತಿಯ ಕೋಶಾಧ್ಯಕ್ಷರಾದ ರೇವಣಸಿದಪ್ಪ ಜಲಾದೆ, ಕಸಾಪ ಜಿಲ್ಲಾಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ, ಟಿ.ಎಂ ಮಚ್ಚೆ, ಕೋಶಾಧ್ಯಕ್ಷ ಶಿವಶಂಕರ ಟೋಕರೆ ಹಾಗೂ ಇತರರು ಉಪಸ್ಥಿತರಿದ್ದರು.