ಸಚಿವ ವಿ. ಸೋಮಣ್ಣ

ವರಿಷ್ಠರ ನಿರ್ಧಾರಕ್ಕೆ ಬದ್ಧ : ಸಚಿವ ಸೋಮಣ್ಣ
ಬೆಂಗಳೂರು, ಏ.೧೨:ವಿಧಾನ ಸಭಾ ಚುನಾವಣೆ ಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆ ಇರಲಿಲ್ಲ. ವರಿಷ್ಠರ ತೀರ್ಮಾನಕ್ಕೆ ತಾವು ಬದ್ಧ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಬೆಂಗಳೂರಿನಲ್ಲಿಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಎರಡೂ ಕ್ಷೇತ್ರಗಳಲ್ಲಿ ನನಗೆ ಟಿಕೆಟ್ ನೀಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಇಂತಹ ಸಂದರ್ಭ ಬರುತ್ತದೆ ಎಂದು ಕನಸಿನಲ್ಲೂ ನಿರೀಕ್ಷೆ ಮಾಡಿರಲಿಲ್ಲ ಎಂದರು. ನನ್ನ ಬೆಂಬಲಿಗರ್‍ಯಾರು ಧೃತಿಗೆಡಬೇಕಾಗಿಲ್ಲ. ಎಲ್ಲವೂ ವಿಧಿ ನಿಯಮ, ಭಗವಂತ ಯಾರಿಗೆ ಏನು ಕೊಡಬೇಕೋ ಅದನ್ನು ಕೊಡುತ್ತಿದ್ದಾನೆ ಎಂದರು,