ಸಚಿವ ಶಿವಾನಂದ ಪಾಟೀಲರ ದೌರ್ಜನ್ಯಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ : ಎಸ್.ಕೆ.ಬೆಳ್ಳುಬ್ಬಿ

module: j; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (-1, -1); aec_lux: 292.169; hist255: 0.0; hist252~255: 0.0; hist0~15: 0.0;

ಕೊಲ್ಹಾರ:ಜೂ.8: ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಚಿವ ಶಿವಾನಂದ ಪಾಟೀಲ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಒತ್ತಾಯಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೀನಾಯವಾಗಿ ಸೋತಿರುವುದರಿಂದ ಈ ಸೋಲಿನ ನೈತಿಕ ಹೊಣೆಯನ್ನು ಸಚಿವ ಶಿವಾನಂದ ಪಾಟೀಲರು ಹೊರುವ ಮೂಲಕ ರಾಜೀನಾಮೆ ನೀಡಬೇಕು ಎಂದು ಅವರು ಪನರುಚ್ಚರಿಸಿದರು.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲರು ಹಾವೇರಿಯಲ್ಲಿಯೂ ಕಾಂಗ್ರೆಸ್ ಪಕ್ಷ ಸೋಲು ಕಂಡಿದೆ, ಬಾಗಲಕೋಟೆಯಲ್ಲಿ ಸ್ಪರ್ಧಿಸಿದ್ದ ಸಚಿವರ ಪುತ್ರಿ ಸಂಯುಕ್ತಾ ಸೋಲು ಕಂಡಿದ್ದಾರೆ, ಅಲ್ಲದೇ ಬಸವನ ಬಾಗೇವಾಡಿ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತದಾರರು 17500 ಹೆಚ್ಚಿನ ಮತಗಳನ್ನು ನೀಡುವ ಮೂಲಕ ಸಚಿವ ಶಿವಾನಂದ ಪಾಟೀಲರ ದೌರ್ಜನ್ಯ ದಬ್ಬಾಳಿಕೆಗೆ ತಕ್ಕ ಉತ್ತರ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಪೆÇಳ್ಳೆ ಭರವಸೆಗಳನ್ನ ಜನತೆ ಸಾರಾಸಗಟವಾಗಿ ತಿರಸ್ಕರಿಸಿದ್ದಾರೆ. ಬಲಿಷ್ಠ ಹಾಗೂ ಸುಭದ್ರ ರಾಷ್ಟ್ರ ನಿರ್ಮಾಣದ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಹೊಣೆಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಕೂಡ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ವಿಜಯಪುರ ಮತ್ತು ಬಾಗಲಕೋಟೆ ಮತದಾರರು ರಮೇಶ ಜಿಗಜಿಣಗಿ ಮತ್ತು ಪಿ.ಸಿ ಗದ್ದಿಗೌಡರ ಅವನ್ನು ಅವಳಿ ಜಿಲ್ಲೆಯಿಂದ ಲೋಕಸಭೆಗೆ ಕಳುಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಕಾರ್ಯಕರ್ತರಿಗೂ ಮತ್ತು ಮತದಾರ ಬಾಂಧವರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತುಳಸಿಗೇರಿ ಹಗೆದಾಳ, ರಾಜಶೇಖರ್ ಶೀಲವಂತ, ವಿರುಪಾಕ್ಷಿ ಕೋಲಕಾರ,ಬಾಬು ಬಜಂತ್ರಿ, ಶ್ರೀಕಾಂತ್ ಬರಗಿ, ಅಶೋಕ್ ಗಿಡ್ಡಪ್ಪಗೋಳ,ಬಸಪ್ಪ ಬಾಟಿ, ಮಲ್ಲಪ್ಪ ಬರಗಿ ಹಾಗೂ ಇನ್ನಿತರು ಇದ್ದರು.