ಸಚಿವ ಸುರೇಶ್ ಕುಮಾರ್‌ಗೆ ಅಭಿನಂದನೆ

ಬೆಂಗಳೂರು, ಏ. ೮- ೨೦೧೫ರ ಹಿಂದೆ ಆರ್ಥಿಕ ಇಲಾಖೆಯಿಂದ ಸಹಮತಿ ಪಡೆದ ಪ್ರಕರಣಗಳಿಗೆ ಅನುಮೋದಿಸಲು ಆದೇಶ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ. ಕರಬಸಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಗುರುವ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕಾರಣಾಂತರಗಳಿಂದ ಕೆಲವು ಆಡಳಿತ ಮಂಡಳಿಯವರು ೩೧-೦೫-೨೦೧೫ರ ಹಿಂದೆ ಖಾಲಿಯಾದ ಹುದ್ದೆಗಳಿಗೆ ಆರ್ಥಿಕ ಇಲಾಖೆಯ ಸಹಮತಿ ಪಡೆದಿರುವುದಿಲ್ಲ. ಇಂತಹ ಪ್ರಕರಣಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಂದ ಮಾಹಿತಿ ತರಿಸಿಕೊಂಡು ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸುವಂತೆ ಸೂಚಿಸಬೇಕೆಂದು ಸಚಿವರಿಗೆ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.
ಇಲ್ಲಿಯವರೆಗೂ ಖಾಲಿ ಇರುವ ಅನುದಾನಿತ ಶಾಲಾ- ಕಾಲೇಜುಗಳಲ್ಲಿ ಖಾಲಿಯಾದ ಹುದ್ದೆಗಳ ಭರ್ತಿಗೆ ಚಾಲನೆ ನೀಡಿ ಗುಣಮಟ್ಟದ ಶಿಕ್ಷಣ ನೀಡಲು ಸಹಕರಿಸಬೇಕೆಂದು ಸಚಿವರಲ್ಲಿ ಕೋರಿದ್ದಾರೆ.