ಸಚಿವ ಸ್ಥಾನದಿಂದ ಪಾರ್ಥ ಚಟರ್ಜಿ ವಜಾ

ಕೋಲ್ಕತಾ, ಜು.28- ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನವಾಗಿರುವ ಪಾರ್ಥ ಚಟರ್ಜಿಯನ್ನು ಸಚಿವ ಸ್ಥಾನದಿಂದ ತೃಣಮೂಲ ಕಾಂಗ್ರೆಸ್ ವಜಾಗೊಳಿಸಿದೆ . ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಶಿಕ್ಷಕರ ನೇಮಕಾತಿಯಲ್ಲಿ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ಎಲ್ಲ‌ ಹುದ್ದೆಯಿಂದ ವಜಾಗೊಳಿಸಬೇಕೆಂಬ ವ್ಯಾಪಕ ಒತ್ತಡಗಳು ಹೆಚ್ಚಾಗಿದ್ದರಿಂದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.
ಪಾರ್ಥ ಚಟರ್ಜಿಯನ್ನು ಪಕ್ಷದ ಎಲ್ಲಾ ಹುದ್ದೆ ಮತ್ತು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಕುನಾಲ್ ಘೋಷ್ ಆಗ್ರಹಿಸಿದ್ದರು.
ಜಾರಿ ನಿರ್ದೇಶನಾಲಯ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ ಎರಡನೇ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ ವೇಳೆ 28.90 ಕೋಟಿ ರೂಪಾಯಿ ನಗದು, 5 ಕೆಜಿಗೂ ಅಧಿಕ ಚಿನ್ನ ವಶಪಡಿಸಿಕೊಳ್ಳಲಾಗಿತ್ತು.
ನಿನ್ನೆ ಜಾರಿ ನಿರ್ದೇಶನಾಲಯ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ ಎರಡನೇ ಫ್ಲ್ಯಾಟ್ ಮೇಲೆ ದಾಳಿ ನಡೆಸಿ 28.90 ಕೋಟಿ ರೂಪಾಯಿ ನಗದು, 5ಕೆಜಿಗೂ ಅಧಿಕ ಚಿನ್ನವನ್ನು ವಶಪಡಿಸಿಕೊಂಡಿತ್ತು.