ಸಚಿವ ಸ್ಥಾನ ನೀಡಲು ಭರಣಿ ಒತ್ತಾಯ

ಕಲಬುರಗಿ:ಮೇ.25: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರಾದ ಅಜಯ್ ಸಿಂಗ್, ಅಲ್ಲಮಪ್ರಭು ಪಾಟೀಲ್, ಎಂ.ವೈ ಪಾಟೀಲ್, ಮತ್ತು ಬಿ.ಆರ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಯುವ ಮುಖಂಡ ಅರುಣ ಎಸ್. ಭರಣಿ ಒತ್ತಾಯಿಸಿದ್ದಾರೆ.

2023 ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿರುವ ಅಜಯ್ ಸಿಂಗ್, ಅಲ್ಲಮಪ್ರಭು ಪಾಟೀಲ್, ಎಂ.ವೈ ಪಾಟೀಲ್, ಮತ್ತು ಬಿ.ಆರ್ ಪಾಟೀಲ್ ಹಾಗೂ ಶರಣಪ್ರಕಾಶ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಲಬುರ್ಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಅರುಣ್ ಎಸ್. ಭರಣಿ ಅವರು ಮನವಿ ಮಾಡಿದರು.

ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಿದು ಸಂತೋಷದ ವಿಚಾರವಾಗಿದ್ದು ಅದೇ ರೀತಿಯಾಗಿ ಅಜಯ್ ಸಿಂಗ್, ಅಲ್ಲಮಪ್ರಭು ಪಾಟೀಲ್, ಎಂ.ವೈ ಪಾಟೀಲ್, ಮತ್ತು ಬಿ.ಆರ್ ಪಾಟೀಲ್ ಹಾಗೂ ಅವರಿಗೂ ಮುಂದಿನ ದಿನಮಾನಗಳಲ್ಲಿ ಸಚಿವ ಸ್ಥಾನ ನೀಡಿ ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬೇಕಾಗಿ ವಿನಂತಿಸಿದರು ಮತ್ತು ಕಲ್ಯಾಣ ಕರ್ನಾಟಕ ಭಾಗದ ಜೋಡೆತ್ತುಗಳೆಂದ ಹೆಸರುವಾಸಿಯಾಗಿರುವ ಪ್ರಿಯಾಂಕ ಖರ್ಗೆ ಅವರ ಜೊತೆಗೆ ಅಜಯ್ ಸಿಂಗ್ ಅವರಿಗೂ ಸಹ ಸಚಿವ ಸ್ಥಾನ ನೀಡಿದರೆ ಮುಂದಿನ ದಿನಮಾನಗಳಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಾರೆ ಹಾಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಅವರಿಗೆ ಭರಣಿ ಆಗ್ರಹಿಸಿದ್ದಾರೆ.