ಸಚಿವ ಸ್ಥಾನ ಸಿಎಂಗೆ ಬಿಟ್ಟಿದ್ದು : ರೇಣುಕಾ


ದಾವಣಗೆರೆ,ಜ೧೧- ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂ ಪರಮಾಧಿಕಾರ. ಸಚಿವ ಸ್ಥಾನ ನೀಡಿದರೆ ಯಶಸ್ವಿಯಾಗಿ ನಿಭಾಯಿಸುವ ಶಕ್ತಿಯಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.ಈ ಕುರಿತಂತೆ ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಸೂರ್ಯ-ಚಂದ್ರ ಎಷ್ಟು ಸತ್ಯವೋ ನಾಯಕತ್ವ ಬದಲಾವಣೆ ಇಲ್ಲ ಎಂಬುದೂ ಅಷ್ಟೇ ಸತ್ಯ. ಯಡಿಯೂರಪ್ಪ ನಾಯಕತ್ವದಲ್ಲಿಯೇ ಬಿಜೆಪಿ ಸರ್ಕಾರ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.