ಸಣ್ಣ ಕೈಗಾರಿಕೆ ಸಚಿವರ ಪ್ರವಾಸ

ಕಲಬುರಗಿ,ಆ.31:ರಾಜ್ಯದ ಸಣ್ಣ ಕೈಗಾರಿಕೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಸೆಪ್ಟೆಂಬರ್ 1 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

ನಂತರ ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣಿಸಿ ಸಂಜೆ 5.30 ಗಂಟೆಗೆ ಯಾದಗಿರಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ  ಮರಳಿ ರಾತ್ರಿ 9.30 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. 
ಸೆಪ್ಟೆಂಬರ್ 2 ರಂದು ಶನಿವಾರ ಬೆಳಿಗ್ಗೆ 7.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ರಾಯಚೂರಿಗೆ ಪ್ರಯಾಣಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮರಳಿ ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. 
ಸೆಪ್ಟೆಂಬರ್ 3 ರಂದು ರವಿವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ನಗರದ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. 
  ಸೆಪ್ಟೆಂಬರ್ 4 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಯಾದಗಿರಿ ಪ್ರಯಾಣಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮರಳಿ ಸಂಜೆ 6 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.