ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪಗೌಡ ದರ್ಶನಾಪುರÀ ಪ್ರವಾಸ

ಶಹಾಪುರ :ಜು.29: ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಇದೇ ಜುಲೈ 29, 31 ಹಾಗೂ ಆಗಸ್ಟ್ 01 ರಂದು ಯಾದಗಿರಿ ಜಿಲ್ಲೆಯಲ್ಲಿ
ಕೈಗೊಳ್ಳಲಿರುವ ಪ್ರವಾಸ ಕಾರ್ಯಕ್ರಮದ ವಿವರ ಈ ಕೆಳಗಿನಂತೆ ಇದೆ ಎಂದು ಮಾನ್ಯ ಸಚಿವ ರ ಆಪ್ತಕಾರ್ಯದರ್ಶಿಗಳು ತಿಳಿಸಿದ್ದಾರೆ.
ಇದೇ ಜುಲೈ 29 ರ ಶನಿವಾರ ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ 11 ಗಂಟೆಗೆ ಶಹಾಪುರಗೆ ಆಗಮಿಸಿ ನಗರದಲ್ಲಿ ವೀರಶೈವ ಸಮಾಜದವರು
ಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಅಂದು ಮಧ್ಯಾಹ್ನ 12 ಗಂಟೆಯಿಂದ ಸ್ಥಳೀಯ ಕಾರ್ಯಕ್ರಮ ಹಾಗೂ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ ನಡೆಸುವರು ನಂತರ ಸಾಯಂಕಾಲ 5 ಗಂಟೆಗೆ ಶಹಾಪುರಯಿಂದ ಕಲಬುರಗಿಗೆ ಪ್ರಯಾಣ ಬೆಳೆಸುವರು.
ಜುಲೈ 31 ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ ಬೆಳಿಗ್ಗೆ 10.30 ಗಂಟೆಗೆ ಯಾದಗಿರಿಗೆ ಆಗಮಿಸಿ ಇಲ್ಲಿಯ ಸ್ವಾಮಿ ವಿವೇಕಾನಂದ ನಗರ ತಾಯಮ್ಮ ದೇವಿ ಶ್ರೀ ಹನುಮಾನ ದೇವಸ್ಥಾನ ಹಾಲ್ ನಲ್ಲಿ ಇಂಜಿನಿಯರ್ ಅಸೋಷಿಯೇಷನ್ ಇವರು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ವಿಚಾರಿಸುವರು. ಸಂಜೆ 05 ಗಂಟೆಗೆ ಕಲಬುರಗಿಗೆ ಪ್ರಯಾಣ ಬೆಳೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 01 ರಂದು ಮಂಗಳವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ ಬೆಳಿಗ್ಗೆ 10.30 ಗಂಟೆಗೆ ಕೆಂಭಾವಿ ಪಟ್ಟಣಕ್ಕೆ ಆಗಮಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ವಿಚಾರಿಸುವರು. ಸಂಜೆ 04 ಗಂಟೆಗೆ ಕಲಬುರಗಿಗೆ ಪ್ರಯಾಣ ಬೆಳೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.