ಸತತ ಪರಿಶ್ರಮದಿಂದ ಭವಿಷ್ಯ ಉಜ್ವಲ : ಪೆಂಚನಕರ್

ಅಫಜಲಪುರ:ಮಾ.21: ವಿದ್ಯಾರ್ಥಿಗಳು ಸತತ ಪರಿಶ್ರಮ ನಿರಂತರ ಅಭ್ಯಾಸ ಮಾಡಿದರೆ ಮಾತ್ರ ಉತ್ತಮ ಅಂಕಗಳಿಸುವ ಜತೆಗೆ ಭವಿಷ್ಯವೂ ಉಜ್ವಲವಾಗುತ್ತದೆ ಎಂದು ಅಫಜಲಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪರಮೇಶ್ವರ.ಡಿ.ಪೆಂಚನಕರ ಅವರು ಹೇಳಿದರು.

ಅಫಜಲಪುರ ಪಟ್ಟಣದ ನಿಸರ್ಗ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ 2020-21 ನೇ ಸಾಲಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಪರಿಶ್ರಮ ಹಾಗೂ ಆಸಕ್ತಿ ಇಲ್ಲದಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಅಸಾಧ್ಯ ಹೀಗಾಗಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ನಿರಂತರ ಕಲಿಕೆಯಲ್ಲಿ ತೊಡಗಬೇಕು ಆಗ ಮಾತ್ರ ಶೈಕ್ಷಣಿಕದಲ್ಲಿ ಉನ್ನತ ಸ್ಥಾನ ಗಳಿಸಿಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಸರ್ಗ ಪಿ.ಯು. ಕಾಲೇಜಿನ ಪ್ರಾಚಾರ್ಯ ಪೀರಸಾಬ ಕಲಾಲ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಾಗಿ ಓದಬಾರದು ವ್ಯಕ್ತಿತ್ವ ವಿಕಾಸಗೊಳ್ಳುವ ಹಾಗೆ ಓದಬೇಕು ಜೀವನದಲ್ಲಿ ಶಿಸ್ತು, ಸಮಯ, ಪ್ರಾಮಾಣಿಕತೆಗೆ ಆದ್ಯತೆ ನೀಡಿ ಎಂದು ತಿಳಿಸಿದ ಅವರು ಇಂದು ಸ್ಪರ್ಧಾತ್ಮಾಕ ಯುಗ ಎಷ್ಟೇ ಅಂಕ ಗಳಿಸಿದರು ಸ್ಪರ್ಧಾತ್ಮಾಕ ಪರೀಕ್ಷೆಗಳು ಬರೆಯಬೇಕಾಗುತ್ತದೆ ಹೀಗಾಗಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಕಾಯ,ವಾಚ,ಮನಸಾದಿಂದ ನಿರಂತರ ಅಭ್ಯಾಸ ಮಾಡಿ ಜೀವನದಲ್ಲಿ ಉನ್ನತ ಹುದ್ದೆ ಪಡಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮು.ಗು.ಅನಿಲಕುಮಾರ ಘನಾತೆ, ನಿವೃತ್ತ ಪ್ರಾಚಾರ್ಯ ಮಹಾದೇವಪ್ಪ ಮಠಪತಿ, ಪ್ರಾಚಾರ್ಯ ಶರಣಗೌಡ ಪಾಟೀಲ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿದ್ದರು.