ಸತತ ಪರಿಶ್ರಮದಿಂದ ಸಾಧನೆ ಸಾಧ್ಯ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.08: ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಏನನ್ನಾದರೂ ಸಾಧಿಸಬಹುದು ಎಂದು ಬಳ್ಳಾರಿ ಉಪವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಜಿ.ಯಂ.ವೀರಭದ್ರಯ್ಯ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಾವಣ ಶುಕ್ರವಾರ ನಿಮಿತ್ತ ಹಮ್ಮಿಕೊಂಡಿದ್ದ ಕನ್ನಡಾಂಬೆಗೆ ನುಡಿನಮನ,ರಾಷ್ಟ್ರೀಯ ಸಾಕ್ಷರತಾ ದಿನ ಹಾಗೂ ಕೆ.ಎ.ಎಸ್. ಅಧಿಕಾರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಾಧನೆಗೆ ಮಾಧ್ಯಮ ಅಡ್ಡಿ ಬರುವುದಿಲ್ಲ. ನಾನು ಕೂಡ ಗೆಣಿಕೆಹಾಳು ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಚೇಳ್ಳಗುರ್ಕಿಯ ಶ್ರೀ ಎರ್ರಿತಾತ ಸರ್ಕಾರಿ ಪ್ರೌಢಶಾಲೆಯಲ್ಲಿ  ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಓದಿ ಶಿಕ್ಷಕನಾಗಿ ಸೇವೆಸಲ್ಲಿಸಿ,ಈಗ ಕೆ.ಎ.ಎಸ್.ಅಧಿಕಾರಿಯಾಗಿದ್ದೇನೆ ಎಂದರು.
ಶಾಲೆಯ ಮುಖ್ಯ ಗುರುಗಳಾದ ರವಿಚೇಳ್ಳಗುರ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿ ನೆಲ,ಜಲ,ಗಡಿ,ಭಾಷೆ ಹಾಗೂ ಭಾಷೆಯ ಅಭಿವೃದ್ಧಿಗೆ ಶ್ರಮಿಸಿದ ಕವಿ,ಸಾಹಿತಿಗಳನ್ನು ಎಲ್ಲರೂ ನೆನೆಯಬೇಕು.
ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯಾಗದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಕೆ.ಎ.ಎಸ್. ಅಧಿಕಾರಿಗಳಾದ ಜಿ.ಎಂ.ವೀರಭದ್ರಯ್ಯ ಅವರನ್ನು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಹಾಗೂ ಶಾಲೆಯ ಎಸ್. ಡಿ.ಎಂ.ಸಿ ಸಹಯೋಗದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಎಸ್. ಡಿ.ಎಂ.ಸಿ.ಅಧ್ಯಕ್ಷ ದೊಡ್ಡ ಕುಮಾರ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರೆ, ಶಿಕ್ಷಕರಾದ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿ ಪೂಜೆ ನೆರವೇರಿಸಿದರು.
ಗ್ರಾಮದವರಾದ ಹೊನ್ನೂರಸ್ವಾಮಿ, ಶಿಕ್ಷಕರಾದ ದಿಲ್ಷಾದ್ ಬೇಗಂ, ಮೋದಿನ್ ಸಾಬ್, ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ,ರಾಮಾಂಜಿನೇಯ, ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಉಪಸ್ಥಿತರಿದ್ದರು.

One attachment • Scanned by Gmail