ಸತತ ಮಳೆ ಆಯಾ  ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ 

ಸಂಜೆವಾಣಿ ವಾರ್ತೆ

ಹೊಸಪೇಟೆ.ಜು.೨೫; ವಿಜಯನಗರ ಜಿಲ್ಲೆಯಲ್ಲಿ ವಿವಿಧ ತಾಲೂಕಿನಲ್ಲಿ ಅತೀ‌ ಹೆಚ್ಚು ಮಳೆಯಾಗುತ್ತಿರುವುದರಿಂದ ಆಯಾ ತಾಲೂಕಿನ ಶಾಲೆಗಳಿಗೆ ಮಂಗಳವಾರ .ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ  ಆದೇಶ ಹೊರಡಿಸಿದ್ದಾರೆ ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ, ಕೊಟ್ಟೂರು ಹಾಗೂ ಕೂಡ್ಲಿಗಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆ ಆಗುತ್ತಿರುವ ಕಾರಣ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆಯ ನಿಮಿತ್ತ ಘೋಷಿಸಿದ ರಜೆಯನ್ನು ಜು.30ರ ಭಾನುವಾರ ಶಾಲೆಯನ್ನು ನಡೆಸಿ ಸರಿದೂಗಿಸಿಕೊಳ್ಳುವಂತೆ‌‌‌ ಆದೇಶದಲ್ಲಿ ಸೂಚಿಸಿದ್ದಾರೆ.