ಸತತ ಮೂರನೇ ದಿನವೂ 4 ಸಾವಿರ ದಾಟಿದ ಸೋಂಕು

ನವದೆಹಲಿ, ಮೇ ೧೪- ದೇಶದಲ್ಲಿ ಕೊರೊನಾ ಸೋಂಕಿನ ಎರಡನೆಯ ಅಲೆಯ ಆರ್ಭಟ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಸತತ ಮೂರನೇ ದಿನವೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ೪೦೦೦ ಗಡಿದಾಟಿದೆ.
ಸೋಂಕು ಹೆಚ್ಚುತ್ತಿರುವ ನಡುವೆ ದೇಶದಲ್ಲಿ ಒಟ್ಟಾರೆ ಸೋಂಕಿನ ಪೈಕಿ ಇದುವರೆಗೂ ೨ ಕೋಟಿಗೂ ಅಧಿಕ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ
ಏರಿಕೆಯಾಗುತ್ತಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ೨,೬೨,೩೧೭ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಸಾವನ್ನಪ್ಪುವ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಶರವೇಗದಲ್ಲಿ ಸಂಖ್ಯೆ ಹೆಚ್ಚಾಗುತ್ತಿದೆ.
ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೩,೪೩,೧೪೪ ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು ಬರೊಬ್ಬರಿ ನಾಲ್ಕು ಸಾವಿರ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆಯಷ್ಟೇ ಇಂದೂ ಕೂಡ ೩,೪೪,೭೭೬ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇಂದು ಬೆಳಗ್ಗೆ ಎಂಟು ಗಂಟೆಯ ತನಕ ದೇಶದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಒಟ್ಟಾರೆ ಸಂಖ್ಯೆ ೨,೪೦,೪೬,೮೦೯ ಕ್ಕೆ ಏರಿಕೆಯಾಗಿದೆ

೨ ಕೋಟಿಗೂ ಅಧಿಕ ಚೇತರಿಕೆ:

ದೇಶದಲ್ಲಿ ಕಳೆದ ಹಲವು ದಿನಗಳಿಂದ ಕೊರೋನಾ ಸೋಂಕು ಸಂಖ್ಯೆ ಜಗತ್ತಿನಲ್ಲಿ ದಾಖಲೆಯ ಸಂಖ್ಯೆಯಲ್ಲಿ ದಾಖಲಾಗಿದೆ. ಈ ಮೂಲಕ ಅತಿ ಹೆಚ್ಚು ಸೋಂಕು ಕಾಣಿಸಿಕೊಂಡ ಅಮೆರಿಕವನ್ನು ಹಿಂದಿಕ್ಕಿ ಭಾರತ ಮುನ್ನಡೆದಿದೆ.

ದೇಶದಲ್ಲಿ ಇದುವರೆಗೂ ಒಟ್ಟಾರೆ ೨.೪೦ ಕೋಟಿಗೂ ಅಧಿಕ ಮಂದಿಗೆ ತಗುಲಿದ್ದು ಇಲ್ಲಿಯತನಕ ೨,೦೦,೭೯,೫೯೯ ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಇಲ್ಲಿಯ ತನಕ ೨,೬೨,೩೧೭ ಮಂದಿ ಸಾವನ್ನಪ್ಪಿದ್ದಾರೆ

ಒಟ್ಟಾರೆ ೧೫.೬೫ ಸಕ್ರಿಯ ಪ್ರಕರಣ

ದೇಶದಲ್ಲಿ ಇದುವರೆಗೂ ದಾಖಲಾಗಿರುವ ಒಟ್ಟಾರೆ ಕೊರೊನಾ ಸೋಂಕಿನ ಪೈಕಿ ಸದ್ಯ ದೇಶದಲ್ಲಿ ಶೇಕಡಾ ೧೫.೬೫ ರಷ್ಟು ಮಂದಿಗೆ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ನಿತ್ಯ ಕೊರೋನಾ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ೩೭,೦೪,೮೯೩ ಮಂದಿಯಲ್ಲಿ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಲಾಗಿದೆ.

ಕೊರೊನಾ ಸೋಂಕು ಮತ್ತು ಸಕ್ರಿಯ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಆತಂಕ ಹೆಚ್ಚಳ ಮಾಡಿದೆ

೭೯.೬೭ ರಷ್ಟು ದಾಖಲು

ದೇಶದಲ್ಲಿ ದಾಖಲಾಗಿರುವ ಒಟ್ಟಾರೆ ಸಕ್ರಿಯ ಪ್ರಕಾರಗಳ ಪೈಕಿ ಕರ್ನಾಟಕ ಮಹಾರಾಷ್ಟ್ರ ಕೇರಳ ರಾಜಸ್ಥಾನ ಉತ್ತರ ಪ್ರದೇಶ, ಆಂಧ್ರಪ್ರದೇಶ ತಮಿಳುನಾಡು ಪಶ್ಚಿಮ ಬಂಗಾಳ ಗುಜರಾತ್ ಛತ್ತೀಸಗಡ ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಶೇ.೭೯.೬೭ ರಷ್ಟು ಸಕ್ರಿಯ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದೇಶದಲ್ಲಿ ಇದುವರೆಗೂ ಸರಿಸುಮಾರು ಹದಿನೆಂಟು ಕೋಟಿ ಮಂದಿಗೆ ಗೌರವನ್ನು ಸೋಂಕಿನ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ