ಬೆಂಗಳೂರು,ಜೂ.೨೧:ರಾಜ್ಯಸರ್ಕಾರದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಆಪ್‌ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿ ಯೋಜನೆಗಳ ಜಾರಿಗೆ ಅಡ್ಡಿ ಮಾಡುತ್ತಿದೆ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಈ ಹೇಳಿಕೆ ಸರಿಯಲ್ಲ. ಈ ರೀತಿ ಅವರು ಮಾತನಾಡುವುದು ತರವಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ವಿಜಯಪುರದಲ್ಲಿಂದು ಮಾತನಾಡಿದ ರಮೇಶ್ ಜಿಗಜಿಣಗಿ ಅವರು ಕೇಂದ್ರ ಸರ್ಕಾರ ಆಪ್ ಹ್ಯಾಕ್ ಮಾಡಿದೆ ಎಂಬ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಸರಿಯಲ್ಲ ಎಂದರು.
ಪ್ರತಾಪ್‌ಸಿಂಹ ಕಿಡಿ
ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಸಂಸದ ಪ್ರತಾಪ್ ಸಹ ಕಿಡಿಕಾರಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಎಂತೆಂಥಾ ಸಚಿವರಿದ್ದಾರೆ. ಸಾರ್ವಜನಿಕವಾಗಿ ಏನು ಮಾತನಾಡಬೇಕು ಎಂಬುದು ಸಚಿವರಿಗೆ ಗೊತ್ತಿಲ್ಲ. ಇದೊಂದು ರೀತಿ ಕರ್ನಾಟಕಕ್ಕೆ ಅಪಮಾನ, ಸತೀಶ್ ಜಾರಕಿಹೊಳಿ ಅಸಂಬದ್ಧ ಹೇಳಿಕೆ ಕೊಟ್ಟು ಕರ್ನಾಟಕ ಮರ್ಯಾದೆ ತೆಗೆದಿದ್ದಾರೆ ಎಂದು ಕಿಡಿಕಾರಿದರು.ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಪ್ಯೂmರ್ ಸರ್ವರ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಹೇಳಿಕೆ ಕೊಟ್ಟು ಸಚಿವರು ಕರ್ನಾಟಕದ ಜನತೆಯಲ್ಲಿ ಮುಜುಗರ ಉಂಟು ಮಾಡಿದ್ದಾರೆ. ಇವರಿಗೆ ಓರಿಯೆಂಟೇಷನ್ ಅಗತ್ಯವಿದೆ ಎಂದರು.