ಸತೀಶ ಹೇಳಿಕೆಗೆ ಸ್ಪಷ್ಟೀಕರಣ ಕೇಳುತ್ತೇವೆ: ಡಿಕೆಶಿ


ಹುಬ್ಬಳ್ಳಿ,ನ.8:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ಹಿಂದೂ ಧರ್ಮದ ಕುರಿತಂತೆ ನೀಡಿರುವ ಹೇಳಿಕೆಯನ್ನು ಪಕ್ಷ ತಳ್ಳಿಹಾಕುಯತ್ತದೆ, ಈ ಹೇಳಿಕೆ ಕುರಿತಂತೆ ಅವರಿಂದ ಸ್ಪಷ್ಟೀಕರಣ ಪಡೆದುಕೊಳ್ಳುತ್ತೇನೆ ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸತೀಶ್ ಹೇಳಿಕೆಯು ಅವರ ವೈಯಕ್ತಿಕ ವಿಚಾರ, ತಮ್ಮ ಮನೆಯಲ್ಲಿ ಅವರು ಈ ಕುರಿತು ಮಾತನಾಡಿದ್ದರೆ ಏನೂ ಆಗುವುದಿಲ್ಲ. ಆದರೆ ಸಾರ್ವಜನಿಕ ಬದುಕಿನಲ್ಲಿ ಈ ರೀತಿ ಹೇಳಿಕೆ ನೀಡುವುದು ಖಂಡನೀಯ ಎಂದು ನುಡಿದರು.
ತಾವು ಸಹ ಒಬ್ಬ ಹಿಂದೂ ಎಂದ ಅವರು, ಸತೀಶ್ ಹೇಳಿಕೆಯಿಂದ ಪಕ್ಷಕ್ಕೆ ಯಾವುದೇ ಹಾನಿಯುಂಟಾಗದು ಎಂದೂ ನುಡಿದರು.
ಭೈರತಿ ಬಸವರಾಜ ಅವರು, ಬೀದಿಬದಿ ವ್ಯಾಪಾರಸ್ಥರಿಂದ ಹಣ ಪಡೆದಿರುವ ಆರೋಪ ಕುರಿತಂತೆ ಪ್ರತಿಕ್ರಿಯಿಸುತ್ತ ಬಿಜೆಪಿ ಸರ್ಕಾರ ನಿಂತಿರುವುದೇ ಕಮಿಷನ್‍ನಿಂದ ಇದು ಲಂಚದ ಸರ್ಕಾರ,ಬಿಜೆಪಿ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಉತ್ತರ ನೀಡಬೇಕು ಎಂದು ಅವರು ನುಡಿದರು.