ಸದಾನಂದ ಗೌಡರಿಗೆ ಕೊರೊನಾ

ಬೆಂಗಳೂರು:ನ.19 ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಸಂಬಂದ ಟ್ವೀಟ್ ಮಾಡಿರುವ ಅವರು ಸೋಂಕು ದೃಡ ಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ.

ಕೋವಿಡ್-19 ಆರಂಭಿಕ ರೋಗ ಲಕ್ಷಣಗಳು ಕಂಡು ಬಂದ ನಂತರ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ವರದಿ ಬಂದಿದೆ ಎಂದಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಜಾಗರೂಕರಾಗಿರಬೇಕು. ಮಾರ್ಗಸೂಚಿ ಅನುಸರಿಸಿ, ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಎಂದು ಅವರು ಮನವಿ ಮಾಡಿದ್ದಾರೆ.