ಸದೃಢ ದೇಹದಲ್ಲಿ ಸದೃಢ ಮನಸ್ಸಿರಲು ಸಾಧ್ಯ

ವಿಜಯಪುರ, ನ ೨೦- ಉತ್ತಮ ಆಲೋಚನೆ ಉತ್ತಮ ಸಾಧನೆಗಳನ್ನು ಮಾಡಲು ಉತ್ತಮವಾದ ಆರೋಗ್ಯವಂತ ದೇಹದ ಧಾರ್ಡ್ಯ ಕೂಡ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಉತ್ತಮ ದೇಹ ದಾರ್ಡ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ಮುಖಂಡರಾದ ಓಬದೇನಹಳ್ಳಿ ಮುನಿಯಪ್ಪ ತಿಳಿಸಿದರು.
ಅವರು ಶನಿವಾರದಂದು ಪಟ್ಟಣದ ಸರ್ಕಾರಿ ಕಿರಿಯ ಕಾಲೇಜಿನ ಆಟದ ಮೈದಾನದಲ್ಲಿ ಬಿಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ಏರ್ಪಡಿಸಿದ್ದ ವಿಜಯಪುರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಾಜಿ ಶಾಸಕ ಜಿ. ಚಂದ್ರಣ್ಣ ಮಾತನಾಡಿ, ದೇಶದಲ್ಲಿ ಒಂದು ಕಾಲಕ್ಕೆ ಕ್ರೀಡೆಗಳಿಗೆ ಪ್ರೋತ್ಸಾಹ ಕಡಿಮೆಯಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ನಂತರ ಕ್ರೀಡೆ ಹಾಗೂ ಕ್ರೀಡಾಕೂಟಗಳಿಗೆ ವಿಶೇಷ ಉತ್ತೇಜನ ನೀಡುತ್ತಿರುವುದರಿಂದ ಕಳೆದ ಒಲಿಂಪಿಕ್ಸ್ ನಲ್ಲಿ ಹಾಗೂ ಏಶಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಅತಿ ಹೆಚ್ಚಿನ ಪದಕಗಳನ್ನು ಗೆದ್ದು, ಪ್ರಪಂಚದೆಲ್ಲೆಡೆ ಭಾರತವನ್ನು ಕ್ರೀಡಾಕ್ಷೇತ್ರದಲ್ಲಿ ತಿರುಗು ನೋಡುವಂತೆ ಆಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಟೌನ್ ಬಿಜೆಪಿ ಅಧ್ಯಕ್ಷ ಆರ್.ಸಿ.ಮಂಜುನಾಥ್, ಕಾರ್ಯದರ್ಶಿ ಮುನೀಂದ್ರ, ಪುರಸಭಾ ಸದಸ್ಯರಾದ ಕನಕರಾಜು, ಪ್ರಭು, ಟೌನ್ ಬಿಜೆಪಿ ಮಾಜಿ ಅಧ್ಯಕ್ಷ ರಾಮು ಭಗವಾನ್‌ರವರುಗಳು ಉಪಸ್ಥಿತರಿದ್ದರು.
೧೯-ವಿಜ್.೨ಸಿ;ವಿಜಯಪುರದ ಸರ್ಕಾರಿ ಕಿರಿಯ ಕಾಲೇಜಿನ ಆಟದ ಮೈದಾನದಲ್ಲಿ ಬಿಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಪಟ್ಟಣದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಬ್ಯಾಟಿಂಗ್ ಆಡುವ ಮೂಲಕ ಉದ್ಘಾಟಿಸುತ್ತಿರುವ ಬಿಜೆಪಿ ಮುಖಂಡರಾದ ಓಬದೇನಹಳ್ಳಿ ಮುನಿಯಪ್ಪ.