ಸದೃಢ ಹೃದಯಕ್ಕೆ ವ್ಯಾಯಾಮ ಶಿಬಿರ

ಹುಬ್ಬಳ್ಳಿ,ಮಾ1 : ಆಶಾ ಡಯಾಬಿಟಿಕ್ ಟ್ರಸ್ಟ್ ಮತ್ತು ಸಂಶೋಧನಾ ಪ್ರತಿಷ್ಠಾನ ವತಿಯಿಂದ ಮಾರ್ಚ್ 3 ರಂದು ಬೆಳಿಗ್ಗೆ 7 ರಿಂದ 9 ರವರೆಗೆ ದೇಶಪಾಂಡೆ ನಗರದ ಜಿಮ್‍ಖಾನಾ ಮೈದಾನದಲ್ಲಿ ಸದೃಢ ಹೃದಯಕ್ಕೆ ವ್ಯಾಯಾಮ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಡಾ. ಜಿ.ಬಿ. ಸತ್ತೂರ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶಾ ಡಯಾಬಿಟಿಕ್ ಟ್ರಸ್ಟ್ ಮತ್ತು ಸಂಶೋಧನಾ ಪ್ರತಿಷ್ಠಾನ, ಕರ್ನಾಟಕ ಜಿಮ್‍ಖಾನಾ, ಐಎಂಎ ಮತ್ತು ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹಾಗೂ ಮಧ್ಯ ವಯಸ್ಕರಲ್ಲಿ ಅದರಲ್ಲೂ ಪುರುಷರಲ್ಲಿ ಹೃದಯಾಘಾತದಿಂದ ಸಾವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಸದೃಢ ಹೃದಯಕ್ಕೆ ವ್ಯಾಯಾಮ ಶಿಬಿರ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಟ್ರಸ್ಟ್ ಧರ್ಮದರ್ಶಿ ಡಾ. ವಿ.ಎಸ್.ವಿ. ಪ್ರಸಾದ ಮಾತನಾಡಿ, ಹೃದಯಕ್ಕೆ ಸಂಬಂಧಿಸಿದಂತೆ ಅನೇಕ ತೊಂದರೆಗಳನ್ನು ಜನರು ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅರ್ಥಪೂರ್ಣ ಶಿಬಿರವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದೇವೆ. ಈ ಶಿಬಿರದಲ್ಲಿ ಹೃದಯಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಹಾಗೂ ವಿವಿಧ ವ್ಯಾಯಾಮಗಳನ್ನು ಜನರಿಗೆ ತಿಳಿಸಲಾಗುವುದು. ಅಲ್ಲದೇ ಪುಸ್ತಕ, ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತದೆ. ಇದರೊಂದಿಗೆ ಪೆÇ್ರಜೆಕ್ಟರ್ ಮೂಲಕ ತಜ್ಞ ವೈದ್ಯರು ಹೃದಯಕ್ಕೆ ಸಂಬಂಧಿಸಿದ ಸಲಹೆಗಳನ್ನು ನೀಡುತ್ತಾರೆ ಎಂದು ಹೇಳಿದರು.
ಟ್ರಸ್ಟ್ ಧರ್ಮದರ್ಶಿ ಕೇಶವ ದೇಸಾಯಿ ಮಾತನಾಡಿ, ಶಿಬಿರದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಹೃದಯ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯುಳ್ಳ ಪೆನ್ ಡ್ರೈವ್ ವಿತರಿಸಲಾಗುವುದು ಎಂದರು.
ಡಾ. ಅಮಿತ್ ಸತ್ತೂರ ಮಾತನಾಡಿ, ಹೃದಯ ಸಂಬಂಧಿ ಖಾಯಿಲೆಗಳು ಬಂದರೆ ನಮ್ಮ ಬಳಿ ಚಿಕಿತ್ಸೆ ನೀಡಲು ಸೌಲಭ್ಯಗಳಿವೆ. ಆದರೆ, ಖಾಯಿಲೆಗಳು ಬಾರದಂತೆ ಮುಂಜಾಗೃತೆ ವಹಿಸಬೇಕು. ಈ ನಿಟ್ಟಿನಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಟ್ರಸ್ಟಿಗಳಾದ ಮಹೇಂದ್ರ ವಿಕಮಸಿ, ಕೇವಲ್ ಲೂನಕರ್, ಜೆ.ಸಿ. ಮಠದ, ಅರವಿಂದ ಕುಬಸದ ಇದ್ದರು.