ಸದ್ದು ಮಾಡಲು ಸಜ್ಜು ಅವತಾರ ಪುರುಷ-2

ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕನಾಗಿ, ವಿತರಕನಾಗಿ ಸದ್ದು ಮಾಡಿ ತುಸು ತೆರೆಗೆ ಮರೆಗೆ ಸರಿದಿದ್ದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತೆ ಸದ್ದು ಮಾಡಲು ಸಜ್ಜಾಗಿದ್ದಾರೆ

ಸಿಂಪಲ್ ಸುನಿ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಚಿತ್ರ ಮುಂದಿನವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಮಾತನಾಡಿ  “ಅವತಾರ ಪುರುಷ 2” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮೋಹನ್ ಚಿತ್ರದ ವಿತರಣೆ ಮಾಡುತ್ತಿದ್ದಾರೆ. ನೋಡುಗರಿಗೆ ಈ ಚಿತ್ರ ಮನೋರಂಜನೆಯ ರಸದೌತಣ ನೀಡುವುದು ಖಚಿತ. ಸದ್ಯದಲ್ಲೇ ಟ್ರೇಲರ್ ಹಾಗೂ ಹಾಡು ಬಿಡುಗಡೆಯಾಗಲಿದೆ. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ಧನ್ಯವಾದ ಎಂದರು.

ನಿರ್ದೇಶಕ ಸುನಿ ಮಾತನಾಡಿ “ಅವತಾರ ಪುರುಷ” ಚಿತ್ರದ ಮೊದಲ ಭಾಗ ನೋಡಿದವರಿಗೂ ಹಾಗೂ ನೋಡದವರಿಗೂ ಈ ಚಿತ್ರ ಇಷ್ಟವಾಗುವುದಂತು ಖಂಡಿತ. ಶರಣ್‍ಗೆ  ನಾಯಕಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದಾರೆ. ಸಾಯಿಕುಮಾರ್, ಸಾಧುಕೋಕಿಲ, ಸುಧಾರಾಣಿ, ಭವ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದರು

ನಟ ಶರಣ್ ಮತನಾಡಿ ಚಿತ್ರ ನೋಡಲ ಕಾತುರದಿಂದ ಕಾಯುತ್ತಿದ್ದೇನೆ. ಕೆಲವರು ಚಿತ್ರ ಸ್ವಲ್ಪ ತಡವಾಯಿತು ಎನ್ನುತ್ತಿದ್ದಾರೆ. ಹಾಗೆನಿಲ್ಲ.  ಮೊದಲ ಭಾಗ ಕೂಡ 22 ರಲ್ಲೇ ಬಿಡುಗಡೆಯಾಗಿತ್ತು.  ಕೂಡ 22 ರಂದೆ ಬಿಡುಗಡೆಯಾಗುತ್ತಿದೆ ಎಂದರು.

ನಟಿ ಆಶಿಕಾ ರಂಗನಾಥ್ ಮಾತನಾಡಿ ಬಹಳ ದಿನಗಳ ನಂತರ ನನ್ನ ಅಭಿನಯದ ಕನ್ನಡ ಚಿತ್ರ ಬಿಡುಗಡೆಯಾಗುತ್ತಿದೆ ಚಿತ್ರಮಂದಿರಗಳಲ್ಲೇ ನೋಡಿ ಎಂದರು. ನಟ ಶ್ರೀನಗರ ಕಿಟ್ಟಿ , ವಿತರಕ ಮೋಹನ್, ಛಾಯಾಗ್ರಾಹಕ ವಿಲಿಯಂ ಡೇವಿಡ್ ಮಾಹಿತಿ ನೀಡಿದರು.