ಸದ್ಯಕ್ಕೆ ಬಿಎಸ್ ವೈ ಮುಖ್ಯಮಂತ್ರಿ: ಸಿ.ಟಿ.ರವಿ ಸ್ಪಷ್ಟನೆ

ಮೈಸೂರು , ಜೂ.1- ಸದ್ಯಕ್ಕೆ ಯಡಿಯೂರಪ್ಪನರೆ ಮುಖ್ಯಮಂತ್ರಿ. ಭವಿಷ್ಯದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ನಾನು ವರ್ತಮಾನ ಬಗ್ಗೆ ಮಾತ್ರ ಮಾತನಾಡಬಲ್ಲೆ.ನಾಳೆ ನಾಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ಪಕ್ಷದಲ್ಲಿ ಭಿನ್ನವಿಭಿನ್ನ ಹೇಳಿಕೆಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ರವಿ ಅವರಿಂದ ಹೇಳಿಕೆ ಹೊರಬಿದ್ದಿದೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ವಾನುಮತದಿಂದ ಯಡಿಯೂರಪ್ಪನವರನ್ನ‌ ಆಯ್ಕೆ ಮಾಡಲಾಗಿದೆ.ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ಬಹುಮತದಿಂದ ಮುಖ್ಯಮಂತ್ರಿ ಆಯ್ಕೆ ಮಾಡಬಹುದು. ಆದರೆ ಸರ್ವಾನುಮತದಿಂದ ಆಯ್ಕೆ
ಸಾಧ್ಯವಿಲ್ಲ ಎಂದರು.
ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.