ಸದ್ಯದಲ್ಲೇ ನೂತನ ಸಹಕಾರಿ ನೀತಿ ಪ್ರಕಟ; ಅಮಿತ್ ಶಾ

ನವದೆಹಲಿ, ಸೆ.‌25- ಶೀಘ್ರದಲ್ಲೇ ಹೊಸ ಸಹಕಾರಿ ನೀತಿಯನ್ನು ಹೊರತರಲಿದ್ದು, ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸ ಮಾಡಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.

ದೆಹಲಿಯಲ್ಲಿ ರಾಷ್ಟ್ರೀಯ ಸಹಕಾರಿ ಸಮಾವೇಶದಲ್ಲಿ ಮಾತನಾಡಿದ ಅವರು,ಮುಂದಿನ ಐದು ವರ್ಷಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ಪಿಎಸಿ)ಗಳ ಈಗಿರುವ ಸಂಖ್ಯೆಯನ್ನು 65’000 ದಿಂದ 3 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಸಹಕಾರಿ ವಲಯ ರಾಜ್ಯದ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ಏಕೆ ಈ ಹೊಸ ಸಚಿವಾಲಯವನ್ನು ರಚಿಸಿತು ಎಂದು ಕೆಲವರು ಆಶ್ಚರ್ಯ ಪಡುತ್ತಾರೆ. ಆದರೆ ಅದಕ್ಕೆ ಕಾನೂನಾತ್ಮಕ ಪ್ರತಿಕ್ರಿಯೆ ನೀಡುತ್ತೇವೆ. ಈ ಬಗ್ಗೆ ನಾನು ಹೆಚ್ಚು ವಾದ ಮಾಡಲು ಬಯಸುವುದಿಲ್ಲ .ಈ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಹಕರಿಸುತ್ತದೆ ಮತ್ತು ಯಾವುದೇ ಘರ್ಷಣೆ ಇರುವುದಿಲ್ಲ ಎಂದು ಅವರು ಹೇಳಿದರು.