
ಮುಂಬೈ,ಸೆ.7-ದೇಶದಲ್ಲಿ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತು ಹೇಳಿಕೆಯನ್ನು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಟೀಕಿಸಿದ್ದಾರೆ.
ಉದಯನಿಧಿ ಸ್ಟಾಲಿನ್ ಸಚಿವರಾಗಿದ್ದಾರೆ ಮತ್ತು ಅವರ ಹೇಳಿಕೆಯನ್ನು ಯಾರೂ ಬೆಂಬಲಿಸುವುದಿಲ್ಲ ಮತ್ತು ಅಂತಹ ಹೇಳಿಕೆಗಳನ್ನು ನೀಡುವುದನ್ನು ತಡೆಯಬೇಕು ಎಂದು ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ಡಿಎಂಕೆಯ ದೃಷ್ಟಿಕೋನ ಅಥವಾ ಅವರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು. ಸುಮಾರು 90 ಕೋಟಿ ಹಿಂದೂಗಳು ಈ ದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಇತರ ಧರ್ಮದ ಜನರು ಸಹ ಈ ದೇಶದಲ್ಲಿ ವಾಸಿಸುತ್ತಿದ್ದಾರೆ. ಯಾವ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದಿದ್ಧಾರೆ.
”ದೇಶದಲ್ಲಿ ಪರಿಸ್ಥಿತಿ ಹದಗೆಡಬಾರದು. ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಲು ಬಿಜೆಪಿಯವರಿಗೆ ನಾವೇ ಮದ್ದುಗುಂಡು ಕೊಡಬಾರದು . ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‍ಗೌರವಾನ್ವಿತ ನಾಯಕ. ಅವರು ಇಂತಹ ಸಮಸ್ಯೆಗೆ ಇತಿಶ್ರೀ ಹಾಡಬೇಕು ಎಂದಿದ್ದಾರೆ.
`ಸನಾತನ ಧರ್ಮ’ದ ನಿರ್ಮೂಲನೆಗೆ ಕರೆ ನೀಡಿರುವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯು ದೇಶದಲ್ಲಿ ಭಾರೀ ರಾಜಕೀಯ ವಿವಾದ ಹುಟ್ಟುಹಾಕಿದೆ. ಡಿಎಂಕೆ ಸದಸ್ಯರಾಗಿರುವ ಇಂಡಿಯಾ ಮೈತ್ರಿಕೂಟವು ಹಿಂದೂ ಧರ್ಮವನ್ನು ಅವಮಾನಿಸಿದೆ ಎಂದು ಆರೋಪಿಸಿ ಬಿಜೆಪಿ ದಾಳಿ ನಡೆಸುತ್ತಿದೆ.
“ಕಳೆದ ಎರಡು ದಿನಗಳಿಂದ ಕೆಲವು ಡಿಎಂಕೆ ಮತ್ತು ಕಾಂಗ್ರೆಸ್ ನಾಯಕರು ಸನಾತನ ಧರ್ಮವನ್ನು ಅವಮಾನಿಸುತ್ತಿದ್ದಾರೆ… ಸನಾತನ ಧರ್ಮವನ್ನು ಅಳಿಸಬೇಕು ಎಂದು ಹೇಳುತ್ತಿದ್ದಾರೆ. ಎಂದು ಕೇಂದ್ರದ ಹಲವು ಸಚಿವರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಂಸದ ಸಂಜಯ್ ರಾವತ್, ಯಾರೂ ಕೂಡ ಯಾವದೇ ಧರ್ಮವನ್ನು ಅವಮಾನ ಮಾಡುವ ರೀತಿ ಹೇಳಿಕೆ ನೀಡಬಾರದು ಎಂದಿದ್ದಾರೆ.
ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳಿ ಮತಬ್ಯಾಂಕ್ ಮತ್ತು ಓಲೈಕೆ ರಾಜಕಾರಣ, ಅವರು ಸನಾತನ ಧರ್ಮವನ್ನು ಕೊನೆಗಾಣಿಸುವ ಮಾತನಾಡುತ್ತಿದ್ದಾರೆ ಮತ್ತು ನಮ್ಮ ದೇಶದ ಸಂಸ್ಕೃತಿ ಮತ್ತು ಇತಿಹಾಸವನ್ನು ಅವಮಾನಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರಿದ್ದಾರೆ.