ಸನ್ನಡತೆ ಆಧಾರದ ಮೇಲೆ 64 ಕೈದಿ ಬಿಡುಗಡೆ-ಜ್ಞಾನೇಂದ್ರ

ಬೆಂಗಳೂರು, ಜು.16- ಎಪ್ಪತ್ತೈದನೆ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸನ್ಬಡತೆ‌ ಆಧಾರದ ಮೇಲೆ 64 ಕೈದಿಗಳನ್ನು ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ. ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು ಸರಿಪಡಿಸುತ್ತೇವೆ. ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಈಗ ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ. ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ ಎಂದು ತಿಳಿಸಿದರು.
ಫೋನ್, ನಿಷೇಧಿತ ವಸ್ತು ಬಳಕೆ ಮಾಡಿದರೆ ಎಫ್ ಐ ಆರ್ ಆಗುತ್ತಿದೆ. ಕೈದಿಗಳ ಶಿಕ್ಷೆ ಪ್ರಮಾಣ ಮುಗಿದ ಬಳಿಕ ಐದು ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ. ಸಿಬ್ಬಂದಿಯ ವಿರುದ್ಧವೂ ಎಫ್ ಐ ಆರ್ ದಾಖಲು ಮಾಡುವ ಮೂಲಕ ಬಿಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಪರಪ್ಪನ ಅಗ್ರಹಾರದಲ್ಲಿ 4 ಜಿ ಜಾಮರ್ ಹಾಕಲಾಗುವುದು. ಅತ್ಯಂತ ಶೀಘ್ರವಾಗಿ ಈ ಕ್ರಮ ಕೈಗೊಳ್ಳಲಾಗುವುದು. ಕೆಲವು ಸಿಬ್ಬಂದಿ ಅನಾಚಾರದಲ್ಲಿ ಕೈಜೋಡಿಸಿದ್ದರು. ಆದರೆ ಈಗ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ 1 ಲಕ್ಷ ಪೊಲೀಸರ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತೆ. ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ 84 ಕೈದಿಗಳ ಬಿಡುಗಡೆ ಮಾಡಲಾಗುತ್ತಿದೆ. ಪಿಎಸ್ಐ ಅಕ್ರಮದ ತ‌ನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಯಾವ ಒತ್ತಡ ಏನೂ ಇಲ್ಲ, ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಿಐಡಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.