
” ಸಪ್ಲೆಯರ್ ಶಂಕರ ” ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.
ಪೊಲೀಸ್ ಸ್ಟೇಷನ್ ದೃಶ್ಯದ ಮೂಲಕ ತೆರೆದುಕೊಳ್ಳುವ ಮೋಷನ್ ಪೋಸ್ಟರ್ ಕುತೂಹಲ ಹುಟ್ಟುಹಾಕಿದೆ. ರಕ್ತ ಮೆತ್ತಿದ ನಾಯಕ ನಿಶ್ವಿತ್ ಕೆರೋಡಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಿಶ್ಚಿತ್ ಕೊರೋಡಿ ಸಪ್ಲೆಯರ್ ಶಂಕರ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಟೈಟಲ್ ಹೇಳುವಂತೆ ಒಬ್ಬ ಬಾರ್ ಸಪ್ಲೆಯರ್ ಸುತ್ತಾ ಇಡೀ ಸಿನಿಮಾ ಸಾಗುತ್ತದೆ.
ನಿಶ್ಚಿತ್ ಗೆ ಜೋಡಿಯಾಗಿ ಲಗೋರಿ ಚಿತ್ರದ ದೀಪಿಕಾ ಆರಾಧ್ಯ ನಟಿಸಿದ್ದು, ಗೋಪಾಲ ಕೃಷ್ಣ ದೇಶಪಾಂಡೆ ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಹೊಸಬರು ಚಿತ್ರದಲ್ಲಿದ್ದಾರೆ.
ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದು, ಆರ್.ಬಿ.ಭರತ್ ಸಂಗೀತ, ಸತೀಶ್ ಕುಮಾರ್. ಛಾಯಾಗ್ರಹಣವಿದೆ.