
ಕೋಲಾರ,ಸೆ.೧೪- ತಾಲೂಕಿನ ಸುಗಟೂರು ಸಬರಮತಿ ಪ್ರೌಢಶಾಲೆಯ ೧೯೯೦-೯೧ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿಗಳಿಂದ ಸ್ನೇಹ ಮಿಲನ ಮತ್ತು ಗುರುವಂದನಾ ಕಾರ್ಯಕ್ರಮವನ್ನು ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಸುಗಟೂರು ಸಬರಮತಿ ಪ್ರೌಢಶಾಲೆಯ ೧೯೯೦-೯೧ನೇ ಸಾಲಿನ ಶಿಕ್ಷಕರಿಂದ ಕಾರ್ಯಕ್ರಮ ಉದ್ಘಾಟನೆಯಾಯಿತು. ಎಸ್.ಎನ್.ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅಗಲಿದ ಶಿಕ್ಷಕರಿಗೆ ಮೌನಾಚರಣೆಯನ್ನು ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಎಸ್.ಎಂ.ಹರಿಪ್ರಸಾದ್, ನಾಗರಾಜ್, ಮುನಿರಾಜು, ಸಂಪತ್, ಹಿರೇಗೌಡ ಮತ್ತು ಎಲ್ಲಾ ವಿದ್ಯಾರ್ಥಿಗಳಿಂದ ಹಾಗೂ ರಾಮಲಕ್ಷ್ಮಮ್ಮ, ಯಶೋಧ, ಸೌಭಾಗ್ಯಮ್ಮ, ಕೋಮಲ, ರೂಪವತಿ ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರಿಂದ ತಮ್ಮ ನೆಚ್ಚಿನ ಗುರುಗಳನ್ನು ಸನ್ಮಾನಿಸಿ ಆತ್ಮೀಯವಾಗಿ ಅವರಿಂದ ಆಶೀರ್ವಾದ ಪಡೆದುಕೊಂಡರು.
ಬಿ.ಎಸ್.ಮಂಜುನಾಥ್ ಸ್ವಾಗತಿಸಿ, ಎಲ್.ಶ್ರೀಧರ್ ನಿರೂಪಿಸಿ, ನಾಗರತ್ನಮ್ಮ ವಂದಿಸಿದರು.