ಸಬ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ

ಸಂಜೆವಾಣಿ ನ್ಯೂಸ್
ಮೈಸೂರು.ಮೇ.31:- ಲಂಚ ಸ್ವೀಕರಿಸುತ್ತಿದ್ದ ವೇಳೆ ಸಬ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರಿನ ಕುವೆಂಪು ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ರಾಧಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಅಪರಾಧ ಪ್ರಕರಣ ಒಂದರ ಸಂಬಂಧ ಕುವೆಂಪುನಗರದ ವ್ಯಕ್ತಿಯಿಂದ 25000 ರೂ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರಾಧಾ ಅವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಐವತ್ತು ಸಾವಿರ ನೀಡುವಂತೆ ರಾಧಾ ವ್ಯಕ್ತಿ ಒಬ್ಬರಿಗೆ ಒತ್ತಾಯಿಸಿದ್ದರು. ಈ ಬಗ್ಗೆ ಆ ವ್ಯಕ್ತಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ 25 ಸಾವಿರ ರೂ. ನೀಡುವಾಗಲೇ ಮೈಸೂರು ಲೋಕಾಯುಕ್ತ ಎಸ್.ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಮೈಸೂರು ಚಾಮರಾಜನಗರ ಲೋಕಾಯುಕ್ತ ಪೆÇಲೀಸರು ದಾಳಿ ನಡೆಸಿ ರಾಧಾ ಅವರನ್ನು ಬಂಧಿಸಿದ್ದಾರೆ.