ಸಭೆ ಪೂರ್ವ ಸಿದ್ದತೆ ಪರಿಶೀಲಿಸಿದ ಸಚಿವ ರಮೇಶ್

ಬೆಳಗಾವಿ,ನ18-ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಗಳನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪರಿಶೀಲಿಸಿದರು.
ಈ ಮಹತ್ವದ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳೂ ಸೇರಿದಂತೆ ಪಕ್ಷದ ಕೇಂದ್ರೀಯ ವರಿಷ್ಠರೂ ಸಹಾ ಭಾಗವಹಿಸುವ ನಿರೀಕ್ಷೆ ಇರುವುದರಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ರಮೇಶ್ ಜಾರಕಿಹೊಳಿ ಅವರು, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್ ಪಾಟೀಲ್, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್, ಬಿಜೆಪಿ ಮುಖಂಡರಾದ ಕಿರಣ್ ಜಾಧವ್, ರಾಜು ಚಿಕ್ಕನಗೌಡ್ರು ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದರು.
ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಅಚ್ಚುಕಟ್ಟಾಗಿ ರಾಜ್ಯ ಕಾರ್ಯಕಾರಿಣಿ ನಡೆಸಲು ಸೂಚನೆ ನೀಡಿದರು. ರಾಜ್ಯದ ಎಲ್ಲೆಡೆಯಿಂದ ವಿವಿಧ ಸ್ಥರದ ನಾಯಕರು ಆಗಮಿಸುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿ ಅನುಸರಿಸಿ ಶಿಸ್ತಿನಿಂದ ಸಭೆ ಆಯೋಜಿಸುವಂತೆ ಸಚಿವ ಜಾರಕಿಹೊಳಿ ತಿಳಿಸಿದರು.