ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ : ಡಾ. ಪುಷ್ಪಾ

(ಸಂಜೆವಾಣಿ ವಾರ್ತೆ)
ಹುಮನಾಬಾದ್ :ಮಾ.7: ಪಟ್ಟಣದ ರಾಜರಾಜೇಶ್ವರ ದೇವಸ್ಥಾನದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ರಾತ್ರಿ ನಡೆದ ಮಹಿಳಾ ದಿನಾಚರಣೆ, ಮಾತೃ ನಮನ ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್ ಜನ್ಮದಿನ ಕಾರ್ಯಕ್ರಮ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಉದ್ಘಾಟಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಮಾತನಾಡಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪರವಾಗಿದೆ. ಶಾಸಕ ರಾಜಶೇಖರ ಪಾಟೀಲ್ ಅವರು ಗ್ರಾಮೀಣ ಪ್ರದೇಶದ ಜನತೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ರಸ್ತೆ ನಿರ್ಮಾಣ, ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದಾರೆ. ಮುಂದೆ ನಡೆಯುವ ವಿಧಾನ ಸಭೆ ಚುನಾವಣೆಯಲ್ಲಿ ಶಾಸಕ ರಾಜಶೇಖರ ಪಾಟೀಲ್‍ಗೆ ಬಹುಮತ ನೀಡಿ ಗೆಲ್ಲಿಸಬೇಕು ಎಂದರು
2023ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ, ಗೃಹ ಜ್ಯೋತಿ ಯೋಜನೆಯಲ್ಲಿ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ ಹಾಗೂ ಗೃಹಲಕ್ಷಿ?? ಯೋಜನೆಯಲ್ಲಿ ಪ್ರತಿಮನೆ ಯಜಮಾನಿಗೆ ಪ್ರತಿ ತಿಂಗಳಿಗೆ 2000 ರೂ ಖಚಿತವಾಗಿ ನೀಡಲಾಗುತ್ತದೆ. ಹೀಹಾಗಿ ಕಾಂಗ್ರೆಸ್ ಸರಕಾರ ರಚನೆಗೆ ಮತದಾರರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್ 34ನೇ ಜನ್ಮದಿನ ಹಿನ್ನಲೆ ನೆರೆದ ಅಪಾರ ಜನ ಸಮೂಹದ ಮಧ್ಯೆ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಧಾರಾವಾಹಿ ನಟಿ ಮೇಘ ಶಟ್ಟಿ, ಹಾಸ್ಯ ಕಲಾವಿದೆ ಸುಧಾ ಬರಗೂರ, ನಿರೂಪಕಿ ಐಶ್ವರ್ಯ ಸೇರಿದಂತೆ ಅನೇಕ ಕಲಾವಿದರಿಂದ ಹಾಸ್ಯ, ಸಂಗೀತ ಮಂಜರಿ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದವು.
ಭಾಲ್ಕಿ ಶಾಸಕ ಈಶ್ವರ ಖಂಡ್ರೆ, ಬೀದರ ಶಾಸಕ ರಹಿಂಖಾನ್, ಶಾಸಕ ರಾಜಶೇಖರ ಪಾಟೀಲ್, ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್, ಎಂಎಲ್ಸಿ ಭೀಮರಾವ ಪಾಟೀಲ್, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ಜಿಪಂ. ಮಾಜಿ ಸದಸ್ಯ ವೀರಣ್ಣ ಪಾಟೀಲ್, ರೇವಣಸಿದ್ದಪ್ಪ ಪಾಟೀಲ್ ಅಕ್ಷಯ ಪಾಟೀಲ್, ರುದ್ರಂ ಪಾಟೀಲ್, ತಾಪಂ. ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಸುರೇಶ ಘಾಂಗ್ರೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರಮಿಯ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ ಇದ್ದರು.
ಹುಮನಾಬಾದ್ ಪಟ್ಟಣದ ಹೊರ ವಲಯದ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆದ ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಿದ ಮಾತೃ ನಮನ ಜತೆಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್ ಜನ್ಮದಿನ ಕಾರ್ಯಕ್ರಮಕ್ಕೆ ನಮ್ಮ ನಿರೀಕ್ಷೆಗೂ ಮೀರಿ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿ ಕಾರ್ಯಕ್ರಮ ಯಶಸ್ವಿ ಮಾಡಿದ ನಿಮ್ಮಲ್ಲರಿಗೂ ಧನ್ಯವಾದಗಳು.
ರಾಜಶೇಖರ ಪಾಟೀಲ್
ಶಾಸಕ, ಹುಮನಾಬಾದ್