ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ.ಜೂ.2:ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ 32 ಹೋಬಳಿಗಳಲ್ಲಿ ವಾಹನಗಳ ಮೂಲಕ ಸಂಚರಿಸಿ (ಗ್ರಾಮ ಮಟ್ಟದಲ್ಲಿ) ರೈತರಿಗೆ ಅರಿವು ಮೂಡಿಸಲು ಇದೇ ಜೂನ್ 1 ರಿಂದ 6ರವರೆಗೆ ಏರ್ಪಡಿಸಲಾಗಿದ್ದ “ಸಮಗ್ರ ಕೃಷಿ ಅಭಿಯಾನ-2021-22” ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀμï ಶಶಿ ಅವರು ಕಲಬುರಗಿ ಮಿನಿ ವಿಧಾನ ಸೌಧದ ಆವರಣದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದಡಿ ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳು ಮತ್ತು ಕೃಷಿ ಆಧುನಿಕ ತಾಂತ್ರಿಕತೆಗಳ ಕುರಿತು ರೈತರಿಗೆ ಅರಿವು ಮೂಡಿಸುವುದು, ರೈತರ ಸ್ಥಳೀಯ ಅವಶ್ಯಕತೆಗಳು ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆಯನ್ನು ಕೈಗೊಳ್ಳಲಾಗುವುದು. ಅವುಗಳ ನಿವಾರಣೆಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಎಲ್ಲಾ ರೈತ ಬಾಂಧವರು ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡಿ, ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಲಬುರಗಿ ಜಂಟಿ ಕೃಷಿ ನಿರ್ದೇಶಕರಾದ ರಿತೇಂದ್ರನಾಥ ಸುಗೂರ, ಉಪ ಕೃಷಿ ನಿರ್ದೇಶಕಿ ಅನುಸೂಯಾ ಹೂಗಾರ ಸೇರಿದಂತೆ ಮತ್ತತಿರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕೃಷಿ ಆಧುನಿಕ ತಾಂತ್ರಿಕತೆ ಕುರಿತು ಮಾಹಿತಿಯುಳ್ಳ ಕರಪತ್ರವನ್ನು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀμï ಶಶಿ ಅವರು ಅವರು ಬಿಡುಗಡೆ ಮಾಡಿದರು.