ಸಮರ್ಥ ವಿಪಕ್ಷ ನಿರ್ವಹಣೆ

ಬೆಂಗಳೂರು, ಮೇ.೧೪- ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಳಿಕ ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪ್ರತಿಕ್ರಿಯಿಸಿ ರಚನಾತ್ಮಕ ವಿರೋಧ ಪಕ್ಷವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.ಚುನಾವಣೆಯಲ್ಲಿ ಸೋಲಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಜನರ ಒಳಿತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದಿದ್ದಾರೆ.ಬಿಜೆಪಿ ಕರ್ನಾಟಕದ ಜನತೆಯ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತದೆ. ಶ್ರದ್ಧೆಯಿಂದ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಮ್ಮ ದೂರದೃಷ್ಟಿಯ ಮೇಲೆ ನಂಬಿಕೆ ಇಟ್ಟ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಜನರ ಒಳಿತಿಗಾಗಿ ಕೆಲಸ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.