ಸಮವಸ್ತ್ರದಿಂದ ಸಮಾನತೆ ಭಾವ: ಪೂಜಾರಿ

ಬೀದರ್: ಜು.15:ಸಮವಸ್ತ್ರವು ಎಲ್ಲರೂ ಸಮಾನರೆಂಬ ಭಾವ ಮೂಡಿಸುತ್ತದೆ ಎಂದು ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಹೇಳಿದರು.

ನಗರದ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಮವಸ್ತ್ರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮವಸ್ತ್ರ ಧರಿಸುವುದರಿಂದ ಮೇಲು-ಕೀಳು ಎನ್ನುವ ಭಾವ ಬರುವುದಿಲ್ಲ. ಸಮವಸ್ತ್ರ ಶಿಸ್ತಿನ ಸಂಕೇತವೂ ಹೌದು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ, ಶಿಸ್ತು, ಸಂಯಮ ಹಾಗೂ ಸಮಯ ಪ್ರಜ್ಞೆ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಸ್ಕೌಟ್ ಮತ್ತು ಗೈಡ್ ತಾಲ್ಲೂಕು ಕಾರ್ಯದರ್ಶಿ ಚಂದ್ರಕಾಂತ ಬೆಳಕುಣಿ ಮಾತನಾಡಿದರು.

ನಿಯಮಿತವಾಗಿ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.