ಸಮಸ್ಯೆ ಬಗೆಹರಿಸುವಲ್ಲಿ ಜಿಲ್ಲಾಡಳಿತ, ನಗರಸಭೆ ವಿಫಲ-ಆರೋಪ

ರಾಯಚೂರು.ಡಿ.೨೪.ನಗರ ಸಮಸ್ಯೆಗಳನ್ನು ನಿವಾರಿಸುವಲ್ಲಿ ನಗರಸಭೆ ಜಿಲ್ಲಾಡಳಿತ ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ನಗರ ಉಸ್ಮಾನಿಯ ತರಕಾರಿ ಮಾರಾಟಗಾರರು ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎನ್ ಮಹಾವೀರ ಅವರು ಆರೋಪಿಸಿದರು.
ಅವರಿಂದು ಸುದ್ದಿಗರೊಂದಿಗೆ ಮಾತನಾಡುತ್ತ ನಗರದ ಶಶಿಮಹಲ್ ವೃತ್ತದ ಮಂಗಳವಾರ ಪೇಟೆ ಶಾಲೆಯ ಹತ್ತಿರ ರಸ್ತೆ ಬೋಂಗ ಬಿದ್ದ ಕಾಲುವೆ ನಿರ್ಮಾಣ ಪರಿಸ್ಥಿತಿಯಲ್ಲಿ ಕಾಮಗಾರಿ ಪ್ರಾರಂಭಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಗರಸಭೆ ಅಧ್ಯಕ್ಷರು ಸೂಚನೆ ನೀಡಿದರು ಅಧಿಕಾರಿಗಳು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಹಾಗೂ ತರಕಾರಿ ಮಾರುಕಟ್ಟೆ ಹಿಂಭಾಗದಲ್ಲಿ ರೈತರು ವ್ಯಾಪಾರಸ್ಥರು ಕುಳಿತು ವ್ಯಾಪಾರ ಮಾಡುವ ಸ್ಥಳದಲ್ಲಿ ಕರವಸೂಲಿ ಮಾಡಬೇಕೆಂದು ತರಕಾರಿ ಮಾರಾಟಗಾರರ ಸಂಘ ಮನವಿ ಮಾಡಿದರೂ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂದು ವಿಷಾದಿಸಿದರು.
ತೀನ್ ಖಂದಿಲ್ ವೃತ್ತದಿಂದ ಅಶೋಕ್ ಡಿಪೋ ವೃತ್ತದವರೆಗೆ ರಸ್ತೆ ಅಗಲೀಕರಣ ಮತ್ತು ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿಲ್ಲ ಇದರ ಬಗ್ಗೆ ಸೂಕ್ತ ಕರಣಗಳು ಇದುವರೆಗೂ ತಿಳಿದುಬಂದಿಲ್ಲ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದರೆ. ಜಿಲ್ಲಾಧಿಕಾರಿಗಳು ಸಾರ್ವಜನಿಕರ ಸಂದರ್ಶನ ವೇಳೆಯಲ್ಲಿ ಅವರ ಸಮಸ್ಯೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಬಗೆ ಹರಿಸುವುದಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿ ತಿಂಗಳು ಮೊದಲ ವಾರ ಮತ್ತು ಕೊನೆಯ ವಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದ ಕುಂದುಕೊರತೆ ಸಭೆ ಯನ್ನು ಇದುವರೆಗೂ ಕರೆದಿಲ್ಲ, ನಗರದಲ್ಲಿ ಸಂಚಾರ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿಲ್ಲ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸುಗಮ ಸಂಚಾರ ಮತ್ತು ಸಂಚಾರ ನಿಯಂತ್ರಣ ಕಟ್ಟುನಿಟ್ಟಾಗಿ ಪಾಲಿಸಲು ಸಂಚಾರಿ ಪೊಲೀಸರಿಗೆ ಆದೇಶ ನೀಡಿದ್ದರು ಕೊಡಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸಂಚಾರಿ ನಿಯಮ ವನ್ನು ಸರಿಯಾಗಿ ಪಾಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಭುನಾಯಕ, ಮೊಮ್ಮದ್ ಶಾ ಖಾನ್, ಕೆ.ವಿ.ಖಾಜಪ್ಪ, ಬಸವರಾಜ,ಉದಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.