ಸಮಾಜದಲ್ಲಿನ ಅಸಮಾನತೆ ನಿವಾರಣೆಗೆ ಹೋರಾಡಿದ ಧೀಮಂತ ನಾಯಕ ಡಾ.ಬಿ.ಆರ್. ಅಂಬೇಡ್ಕರ:ಪ್ರೇಮಸಾಗರ ದಾಂಡೇಕರ

ಬೀದರ: ನ. 18: ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಜೀವನ ಎಂದರೆ ಓದು ಓದಿನಲ್ಲೆ ಅವರ ಜೀವನ ಕಳೆದು ಹೋಗಿದೆ. ದೇಶ ವಿದೇಶಗಳಲ್ಲಿ ವಿದ್ಯಾಭ್ಯಾಸವನ್ನು ಮಾಡಿ ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಣೆ ಮತ್ತು ಮಹಿಳೆಯರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ನೀಡುವ ಸಲುವಾಗಿ ಹೋರಾಡಿದ ಧೀಮಂತ ನಾಯಕ. ಬಡತನದಲ್ಲಿ ಹುಟ್ಟಿದ ಮಾಣಿಕ್ಯ ಪುಸ್ತಕವೇ ತಮ್ಮ ಜೀವನಾಳ ಮಾಡಿಕೊಂಡ ಶ್ರೇಷ್ಠ ವ್ಯಕ್ತಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಸಾಗರ ದಾಂಡೇಕರ ಹೇಳಿದರು.
ಅವರು ಶುಕ್ರವಾರ ಬೀದರ ಬಿವಿಬಿ ಕಾಲೇಜು ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೀದರ ಬಿ.ವಿ ಭೂಮರೆಡ್ಡಿ ಪದವಿ ಮಹಾವಿದ್ಯಾಲಯ, ಬೀದರ ಆಂತರಿಕ ಗುಣಮಟ್ಟ ಭರವಸೆ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ “ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಘೋಡಂಪಳ್ಳಿ ಅಟಲ ಬಿಹಾರಿ ವಾಜಪೇಯಿ ವಸತಿ ಕಾಲೇಜಿನ ಕನ್ನಡ ಉಪನ್ಯಾಸಕ ದೇವಿದಾಸ ಜೋಶಿ ಮಾತನಾಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಡಾ.ಬಿ.ಆರ್. ಅಂಬೇಡ್ಕರ ಅವರ ಬದುಕು ಬರಹ ಜೀವನದ ಕುರಿತು ಇವತ್ತಿನ ಯುವಪೀಳಿಗೆಗೆ ತಿಳಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬಿವಿಬಿ ಪದವಿ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಣಮಂತಪ್ಪ ಬಿ. ಸೇಡಂಕರ್ ಡಾ. ಬಾಬಾ ಸಾಹೇಬ ಅಂಬೇಡ್ಕರವರ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ದ್ವೀತಿಯ ತೃತೀಯ ಮತ್ತು ಸಮಾಧಾನಕರ ಬಹುಮಾನವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಬಿವಿಬಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪಿ.ವಿಠಲರೆಡ್ಡಿ, ಕಾರ್ಯಕ್ರಮದ ನಿರ್ಣಯಕರಾದ ರೇಣುಕಾ ಮಳ್ಳಿ, ಬಸವರಾಜ ಕಾರ್ಯಕ್ರಮದ ಉಪಪ್ರಾಂಶುಪಾಲರಾದ ಅನಿಲಕುಮಾರ ಆಣದೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.