ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ

ಸಂಜೆವಾಣಿ ನ್ಯೂಸ್
ಮೈಸೂರು,ಆ.26:- ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆ ಅವಶ್ಯಕ. ಪ್ರಸ್ತುತ ದಿನಗಳಲ್ಲಿ ಬ್ರಾಹ್ಮಣ ಸಮಾಜ ಜಾಗೃತಿ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಹೇಳಿದರು.
ಚಾಮರಾಜಪುರಂನಲ್ಲಿರುವ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಚೇರಿಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ವಿಪ್ರ ಸಹಾಯವಾಣಿ ವತಿಯಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಹ ಕಾರ್ಯದರ್ಶಿಯಾಗಿ ನೇಮಕವಾದ ಜಯಸಿಂಹ ಶ್ರೀಧರ್ ಹಾಗೂ ಶ್ರೀ ರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲದ ಮೈಸೂರು ವಲಯದ ಕಾರ್ಯದರ್ಶಿ ಯಾಗಿ ನೇಮಕವಾದ ರಾಕೇಶ್ ಭಟ್ ರವರಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಸಲ್ಲಿಸಿ ಮಾತನಾಡಿದ ಅವರು ಸರ್ವೇ ಜನಃ ಸುಖಿನೋ ಭವಂತು’’ ಎಂಬ ವಾಣಿಯಂತೆ ಬ್ರಾಹ್ಮಣರು ಸಮಸ್ತ ಹಿಂದೂ ಧರ್ಮದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು. ಜಾತಿಯಿಂದ ಹಿಂದೂ ಧರ್ಮ ಒಡೆಯದಂತೆ ಬ್ರಾಹ್ಮಣ ಸಮಾಜ ಸಮಸ್ತ ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಎನ್ ವಿ ನಾಗೇಂದ್ರ ಬಾಬು, ಶ್ರೀನಿವಾಸ್ ಪ್ರಸಾದ್, ಎಸ್ ಎನ್ ರಾಜೇಶ್, ರಂಗನಾಥ್, ಸುಚೇಂದ್ರ, ಚಕ್ರಪಾಣಿ, ಪ್ರಶಾಂತ್, ಹಾಗೂ ಇನ್ನಿತರರು ಭಾಗವಹಿಸಿದರು