ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ

ಮಾನ್ವಿ,ಜು.೧೩-
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾನ್ವಿಯ ಪದಾಧಿಕಾರಿಗಳಿಂದು ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿದರು.
ಮಾನ್ವಿ ತಾಲೂಕಿನ ಅಖಿಲ ಭಾರತ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಅರುಣ್ ಚಂದಾ, ಹಾಗೂ ಕಾರ್ಯದರ್ಶಿ ಎಚ್. ಮೌನೇಶ್ ಮತ್ತು ಖಜಾಂಚಿ ಗುರುಸಿದ್ದಪ್ಪ ಗೌಡ ಕಣ್ಣೂರು ಎಂ.ಬಿ. ಪಾಟೀಲ್ ಅವರನ್ನು ಸನ್ಮಾನಿಸಿ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಲಿಂಗಾಯತ ಸಮಾಜದ ಮುಖಂಡರಾದ ಬಸವರಾಜ್ ಹರನಳ್ಳಿ, ಶರಣಯ್ಯ ಸ್ವಾಮಿ, ಇತರರು ಉಪಸ್ಥಿತರಿದ್ದರು.