ಸಮಾಜದ ಅಶಾಂತಿ ನಿರ್ಮಿಸುತ್ತಿರುವ ಸಂಘಟನೆಗಳನ್ನು ನಿಷೇಧಿಸುವಂತೆ ಮನವಿ.


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜು.31: ರಾಜ್ಯದಲ್ಲಿ ಸರಣಿ ಕೊಲೆ ಪ್ರಕರಣಗಳು ನಡೆಯುತ್ತಿದ್ದು ಸಮಾಜದಲ್ಲಿ ನಾಗರಿಕರು ಭಯಪಟ್ಟು ಬದುಕುವಂತಹ ವಾತಾವರಣ ನಿರ್ಮಾಣವಾಗುತ್ತಿದೆ ಇಂತಹ ಪ್ರಕರಣಗಳಿಗೆ ಸಹಕರಿಸುವ ಸಂಘಟನೆಗಳನ್ನು ನಿಷೇಧಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರಿಗೆ ಮನವಿ ಪತ್ರ ಸಲ್ಲಿಸಿತು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಹಾಗೂ ಹಿಂದಿನ ಕೊಲೆ ಸರಣಿಗಳ ಹಿಂದೆ SDPI, PFI, CFI ಸಂಘಟನೆಗಳ ಬೆಂಬಲ ಇರುವುದು ಎಲ್ಲ ಪ್ರಕರಣಗಳಲ್ಲಿ ಕಂಡು ಬರುತ್ತಿದ್ದು ಸರರ್ಕಾರವು ಈ ಸಂಘಟನೆಗಳನ್ನು ಬ್ಯಾನ್ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ವಿನೋದ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.