ಸಮಾಜದ ಎಲ್ಲರೂ ಸಾಕ್ಷರರಾಗಬೇಕು;ಕೆ.ಎಸ್.ನವೀನ್

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಸೆ.೯: ನಮ್ಮಲ್ಲಿ ಸಂಸ್ಕಾರ ಇದೆ. ಆದರೆ ಸಾಕ್ಷರತೆಯ ಕೊರತೆ ಇದೆ. ಸಮಾಜದ ಎಲ್ಲರೂ ಸಾಕ್ಷರರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಜಾನುಕೊಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸಾಕ್ಷರತೆಯ ಬಗ್ಗೆ ನನಗೆ ಸಾಕಷ್ಟು ಆಸಕ್ತಿ ಇದೆ. ಸಮಾಜದ ಪ್ರತಿಯೊಬ್ಬರು ಸಾಕ್ಷರರಾಗಬೇಕು. ಅಕ್ಷರ ಜ್ಞಾನದಿಂದ ಸಶಕ್ತ ಸಮಾಜ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯಪಟ್ಟರು.ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣದಿಂದ ವಂಚಿತರಾದ ಸಮಾಜದ ಎಲ್ಲಾ ಜನರಿಗೂ ಶಿಕ್ಷಣ ನೀಡುವುದು ಇಲಾಖೆಯ ಕರ್ತವ್ಯವಾಗಿದೆ. ಇದರ ಸೌಲಭ್ಯವನ್ನು ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು ಎಂದು ತಿಳಿಸಿದರು.ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಅವರು ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಡಯಟ್ ಉಪನ್ಯಾಸಕರಾದ ವೆಂಕಟೇಶ್, ನಾಗರಾಜ್, ಜ್ಞಾನೇಶ್ವರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಸಾಕ್ಷರತಾ ಇಲಾಖೆಯ ಕಾರ್ಯಕ್ರಮ ಸಹಾಯಕ ಮಂಜುನಾಥ್, ಜಾನುಕೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷೆ ತ್ರೀವೇಣಿ, ಗ್ರಾಮ ಪಂಚಾಯಿತಿ ಸದಸ್ಯ ರಾಮಲಿಂಗಪ್ಪ, ಶಿಕ್ಷಕರಾದ ದಿನೇಶ್, ಶಿವಮೂರ್ತಿ ಇದ್ದರು.