ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು ಅವಶ್ಯಕ

ಶಿವಮೊಗ್ಗ.ಏ.೧೨: ಜೀವನದ ವಿಶೇಷ ಸಂದರ್ಭಗಳಲ್ಲಿ ರಕ್ತದಾನ ಸೇರಿದಂತೆ ಸಮಾಜಮುಖಿ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್.ಎಸ್.ಕುಮಾರ್ ಹೇಳಿದರು.ಜನ್ಮದಿನದ ಪ್ರಯುಕ್ತ ಶಿವಮೊಗ್ಗದ ಭಾರತೀಯ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಮಾಡುವುದರ ಮುಖಾಂತರ ವಿಶೇಷವಾಗಿ ಆಚರಿಸಿಕೊಂಡು ಮಾತನಾಡಿದರು. ಜನ್ಮದಿನದ ಪ್ರಯುಕ್ತ ರಕ್ತದಾನದಂತಹ ಸಾರ್ಥಕ ಕಾರ್ಯ ಮಾಡಿದ್ದೇನೆ. ಪ್ರತಿಯೊಬ್ಬರು ಜನ್ಮದಿನ ಹಾಗೂ ವಿಶೇಷ ಸಂದರ್ಭದಲ್ಲಿ ರಕ್ತದಾನ ಮಾಡಬೇಕು. ಇದರಿಂದ ಕಷ್ಟದಲ್ಲಿ ಇರುವವರಿಗೆ ನೆರವು ನೀಡಿದಂತಾಗುತ್ತದೆ ಎಂದು ತಿಳಿಸಿದರು.ರಕ್ತದ ಅವಶ್ಯಕತೆ ನಿರಂತರವಾಗಿ ಬೇಕಾಗುವುದರಿಂದ ಹಾಗೂ ರಕ್ತದ ಕೊರತೆ ಆಗದಂತೆ ನೋಡಿಕೊಳ್ಳಲು ಆರೋಗ್ಯವಂತಯ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ರಕ್ತದ ಬೇಡಿಕೆಗೆ ಅವಶ್ಯಕತೆಗೆ ಅನುಗುಣವಾಗಿ ರಕ್ತದಾನ ಶಿಬಿರಗಳು ನಡೆಯಬೇಕು. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಮಹಾತ್ಕಾರ್ಯದಲ್ಲಿ ಭಾಗಿಯಾಗಬೇಕು ಎಂದರು.