ಸಮಾಜಮುಖೀ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿ ಚನ್ನಬಸವನಗೌಡ

ಕೊಟ್ಟೂರು, ಜೂ.1: ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ತಾವು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖೀ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪಿಚನ್ನಬಸವನಗೌಡ ಹೇಳಿದರು.
ಪಟ್ಟಣದ ಕೊಟ್ಟೂರೇಶ್ವರಮಹಾವಿದ್ಯಾಲಯದ ಪ್ರಾಂಶುಪಾಲ ಮಂಜುನಾಥ ಅವರ ವಯೋ ನಿವೃತ್ತಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸರಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಬೋಧನಾ ಕೌಶಲ್ಯದಿಂದ ಶಿಕ್ಷಣ ರಂಗದಲ್ಲಿ ಸುದೀರ್ಘ‌ ಸೇವೆ ಸಲ್ಲಿಸಿ ಸರ್ವರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಸಾರ್ಥಕ ಸೇವೆ ಸಲ್ಲಿಸಿದ ಮಂಜುನಾಥ ಅವರ ಸೇವೆ ಸಂಸ್ಥೆಗೆ ತೃಪ್ತಿ ತಂದಿದೆ ಎಂದರು.ಉಪನ್ಯಾಸಕರಾದ
ಸಿದ್ದನಗೌಡ, ಕುಸುಮ, ಮತ್ತಿತರರು ಉಪಸ್ಥಿತರಿದ್ದರು.