ಸಮಾಜ ಬಲಿಷ್ಠಗೊಳ್ಳುವಲ್ಲಿ ಯುವಶಕ್ತಿಯ ಪಾತ್ರ ಪ್ರಮುಖ: ನ್ಯಾ.ಸತೀಶ್ ಜೆ.ಬಾಳಿ

Bellary SanjevaniAttachments1:38 PM (59 minutes ago)
to me


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ,ಮಾ.9: ಯುವಶಕ್ತಿಯು ಬಲಿಷ್ಠ ಶಕ್ತಿ ಇದ್ದಂತೆ, ಯುವ ಸಮಾಜವು ನಿರ್ದಿಷ್ಟ ಗುರಿಯನ್ನು ಹೊಂದಿ ಮುನ್ನೆಲೆಗೆ ಬಂದರೆ ಸಮಾಜವು ಬಲಿಷ್ಠಗೊಳ್ಳುತ್ತದೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಸತೀಶ್ ಜೆ.ಬಾಳಿ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಭಾಂಗಣದಲ್ಲಿ ಇಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ “ಮಾದಕ ವಸ್ತುಗಳ ಸೇವನೆಯಿಂದ ಯುವ ಜನತೆಯ ಮೇಲೆ ಉಂಟಾಗುವ ದುಷ್ಪರಿಣಾಮ” ಕುರಿತು  ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಿನ ವಾಸ್ತವ ಸಮಾಜದಲ್ಲಿ ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳು ಹಾಗೂ ಇತರೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದರು.
ಪಾಲಕರು ಮಕ್ಕಳ ಮೇಲೆ ನಿಗಾ ವಹಿಸಬೇಕು. ಕಾಲೇಜು ಸಮಯದಲ್ಲಿ ಯಾರ ಜೊತೆ ಬೆರೆಯುತ್ತಿದ್ದಾರೆ ಹಾಗೂ ಯಾವ ವ್ಯಸನಕ್ಕೆ ಒಳಗಾಗಿದ್ದಾರೆ ಎಂಬುದನ್ನು ತಿಳಿಯಬೇಕು. ಮಕ್ಕಳ ಚಲನ ವಲನಗಳನ್ನು ಗಮನಿಸಬೇಕು ಎಂದು ತಿಳಿಸಿದರು.
1985ರಲ್ಲಿ ಎನ್ ಟಿ ಪಿ ಎಸ್ ಆಕ್ಟ್ ಜಾರಿ ಬಂದಿದ್ದು, ಕಾಲ ಕಾಲಕ್ಕೆ ತಿದ್ದುಪಡಿಯಾಗುತ್ತಿದೆ. ಯುವಕರು ಮಾದಕ ವಸ್ತುಗಳಿಗೆ ವ್ಯಸನಿಗಳಾದಾಗ ಸಮಾಲೋಚನೆಗೆ ಒಳಪಡಿಸಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಸ್ಟಾಪ್ ಟೊಬೇಕೋ  ಎನ್ನುವ ಆಪ್ ಬಂದಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡುವುದು ಕಂಡುಬಂದಲ್ಲಿ ಫೋಟೋ ತೆಗೆದು ಕಳುಹಿಸಬಹುದಾಗಿದೆ. ಪೊಲೀಸ್ ಇಲಾಖೆಯು ತಕ್ಷಣವೇ ಕ್ರಮವಹಿಸಲಾಗುತ್ತದೆಂದರು.
ಶಾಲಾ ಕಾಲೇಜುಗಳಲ್ಲಿ ಆಂಟಿ ಡ್ರಗ್ ಕ್ಲಬ್ ಆರಂಭಿಸಿ ಧೂಮಪಾನ ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿ ಡಾ.ಹೆಚ್. ಎಲ್. ಜನಾರ್ಧನ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಯುವ ಸಮಾಜವು ದುಶ್ಚಟಗಳಿಗೆ ಬಲಿಯಾಗದೇ ತಮ್ಮ ಶಕ್ತಿಯನ್ನು ಒಳ್ಳೆಯ ಕಡೆಗೆ ವಿನಿಯೋಗ ಹೊಂದಿದರೆ ಕುಟುಂಬ ಮತ್ತು ಸಮಾಜವು ಅಭಿವೃದ್ಧಿ ಹೊಂದುತ್ತದೆಂದರು.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಒಂದು ತಂಡವು ಶಾಲಾ ಕಾಲೇಜು ಸುತ್ತ ಮುತ್ತಲೂ 100 ಮೀ. ವ್ಯಾಪ್ತಿಯೊಳಗೆ ತಂಬಾಕು ಮತ್ತು ಇತರೆ ವಸ್ತುಗಳು ಮಾರುವ ಅಂಗಡಿಗಳು ಇರದಂತೆ ನೋಡಿಕೊಳ್ಳಲು ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾರ್ಯಾಗಾರದಲ್ಲಿ ವಿಮ್ಸ್ ಹಿರಿಯ ಮನೋವೈದ್ಯಶಾಸ್ತ್ರಜ್ಞ ಡಾ.ನಿಶಾಂತ್ ಅವರು ಮಾದಕ ವಸ್ತುಗಳ ಸೇವನೆಯಿಂದ ಯುವ ಜನತೆಯ ಮೇಲೆ ಉಂಟಾಗುವ ದುಷ್ಪರಿಣಾಮ ಎಂಬ ವಿಷಯದ ಕುರಿತು,
ಬೆಂಗಳೂರು ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ್.ಬಿ.ಯು ಅವರು ಕೋಟ್ಪಾ ಸೆಕ್ಷನ್ 4, 5, 6ಎ, 6ಬಿ ಹಾಗೂ 7 ರ ವಿವರಣೆ,
ಜಿಲ್ಲಾ ಆಸ್ಪತ್ರೆಯ ತಂಬಾಕು ವ್ಯಸನ ಮುಕ್ತ ಕೇಂದ್ರದ ಆಪ್ತ ಸಮಾಲೋಚಕ ಮಲ್ಲೇಶಪ್ಪ ಅವರು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಚಿಕಿತ್ಸೆ ಹಾಗೂ ಸೌಲಭ್ಯಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.