ಸಮಾಜ ವಿಜ್ಞಾನ ಸಂಶೋಧÀನೆಯಲ್ಲಿ ತಂತ್ರಜ್ಞಾನದ ಪಾತ್ರ ಅತ್ಯಂತ ಮಹತ್ವಃ ಬಿ.ಕೆ.ತುಳಸಿಮಾಲ

ವಿಜಯಪುರ, ನ.24-ಸಮಾಜ ವಿಜ್ಞಾನ ಸಂಶೋಧÀನೆಯಲ್ಲಿ ತಂತ್ರಜ್ಞಾನದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತಂತ್ರಜ್ಞಾನದ ವಿಸ್ತøತ ಬಳಕೆಯಿಂದಾಗಿ ಸಮಾಜ ವಿಜ್ಞಾನಗಳ ಸಂಶೋಧನಾ ವಿಧಾನದಲ್ಲಿ ಹಾಗೂ ಸ್ವರೂಪದಲ್ಲಿ ಅನೇಕ ಬದಲಾವಣೆಗಳಾಗಿವೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ಅವರು ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಭಾರತದ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯ ತಳಸಮುದಾಯಗಳ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸಂಶೋಧನಾ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಸಮಾಜ ವಿಜ್ಞಾನಗಳ ಸಂಶೋಧನೆಯಲ್ಲಿ ತಂತ್ರಜ್ಞಾನದ ಬಳಕೆಯ ಕುರಿತ ಪ್ರಾಯೋಗಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜ ವಿಜ್ಞಾನದಲ್ಲಿ ಸಂಶೋಧನೆಯನ್ನು ಉತ್ತೇಜನಗೊಳಿಸುವುದು ನಮ್ಮ ಪ್ರಾಮುಖ್ಯತೆಯಾಗಬೇಕು. ನಿರಂತರ ಸಂಶೋಧನೆಯ ಮೂಲಕ ಸುಸ್ಥಿರ ಅಭಿವೃದ್ಧಿ ಮಾಡುವುದು, ಸಮಾಜವನ್ನು ಸಮೃದ್ಧಿಗೊಳಿಸುವುದು ಆದ್ಯಕರ್ತವ್ಯವಾಗಬೇಕು ಎಂದರು.
ಅಧ್ಯಯನದ ಉದ್ದೇಶಗಳಿಗೆ ಬೇಕಾದಂತೆ ಅಂಕಿ-ಅಂಶಗಳನ್ನು ಬೇರೆ ಬೇರೆ ವಿಧಾನದಲ್ಲಿ ಬಳಕೆ ಮಾಡಬೇಕು. ಅವುಗಳ ಆಧಾರದ ಮೇಲೆ ಅಭಿವೃದ್ಧಿಯನ್ನು ವಿಶ್ಲೇಷಿಸಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೆಂಗಳೂರಿನ ಕೆಎಸ್‍ಸಿಎಸ್‍ಟಿಯ ಯೋಜನಾ ಸಂಯೋಜಕ ಗಂಗಾಧರಪ್ಪ.ಆರ್. ಮಾತನಾಡಿ, ಇಂತಹ ಕಾರ್ಯಾಗಾರಗಳು ಸಂಶೋಧನಾರ್ಥಿಗಳ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಸಹಕಾರಿಯಾಗಿವೆ. ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಂಶೋಧನೆ ಮಾಡಿದಾಗ ಅದು ಸಮಾಜದ ಅಭಿವೃದ್ಧಿಗೆ ದಾರಿದೀಪವಾಗುತ್ತದೆ ಎಂದರು.
ವೇದಿಕೆ ಮೇಲೆ ಮಹಿಳಾ ವಿವಿಯ ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಸಮಾಜ ವಿಜ್ಞಾನ ನಿಕಾಯದ ಡೀನ ಪ್ರೊ.ಡಿ.ಎಂ.ಮದರಿ ಇದ್ದರು. ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆಯನ್ನು ಹಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಸಕ್ಪಾಲ ಹೂವಣ್ಣ ಅತಿಥಿಗಳನ್ನು ಸ್ವಾಗತಿಸಿದರು. ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ತಳಸಮುದಾಯಗಳ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಆರ್.ವಿ.ಚಂದ್ರಶೇಖರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ,ಭಾರತಿ ಗಾಣಿಗೇರ ವಂದಿಸಿದರು. ಡಾ.ಹನುಮಂತಯ್ಯ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.