ಸಮಾರೋಪ ಸಮಾರಂಭ

(ಸಂಜೆವಾಣಿ ವಾರ್ತೆ)
ಬಾದಾಮಿ,ಜ18: ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕøತಿ, ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸತ್ಪ್ರಜೆಗಳಾಗಿ ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಅವರು ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಕಾಲ “ಶ್ರೀ ಕಾಳಿದಾಸ ಉತ್ಸವ-2024” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಸಚಿವ ಚಿಮ್ಮನಕಟ್ಟಿ ಅವರು 1977 ರಲ್ಲಿ ಕಾಳಿದಾಸ ಶಿಕ್ಷಣ ಸಂಸ್ಥೆಯ ಕಟ್ಟಿ ಶಿಕ್ಷಣ, ಸಂಸ್ಕೃತಿ, ಸಾಧಕರ ಸನ್ಮಾನ ಮಾಡುವ ಮೂಲಕ ಹೆಮ್ಮರವಾಗಿ ಬೆಳೆದಿದೆ. ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಲು ನಾವು, ನಿವೆಲ್ಲರೂ ಶ್ರಮಿಸೋಣ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ, ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ, ಶಾಸಕ ಭೀಮಸೇನ ಚಿಮ್ಮನಕಟ್ಟಿ ಸ್ವಾಗತಿಸಿ ಪ್ರಾಸ್ಥಾವಿಕವಾಗಿ ಮಾತನಾಡಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ವಿವಿದ ವಿಶಿಷ್ಟ ಕಾರ್ಯಕ್ತಮಗಳ ಕುರಿತು ವಿವರಿಸಿದರು.
ಹಾವೇರಿ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ವೇದಿಕೆಯ ಮೇಲೆ ಪುರಸಭೆ ಸದಸ್ಯ ಮಂಜುನಾಥ ಹೊಸಮನಿ, ಪ್ರಭಾರಿ ಡಿಡಿಪಿಐ ಬಿ.ಕೆ.ನಂದನೂರ, ತಹಶೀಲದಾರ ಜೆ.ಬಿ.ಮಜ್ಜಗಿ, ಬಿಇಒ ಎನ್.ವೈ.ಕುಂದರಗಿ, ಪಿ.ಎಸ್.ಐ.ನಿಂಗಪ್ಪ ಪೂಜಾರ, ಡಾ.ಕಿರಣ ಕುಳಗೇರಿ, ಡಾ.ಬಸವರಾಜ ಕೋಲಾರ, ಈರಣ್ಣ ಕರಿಗೌಡ್ರ ಶರಣಗೌಡ ಪಾಟೀಲ ಸೇರಿದಂತೆ ಶ್ರೀ ಕಾಳಿದಾಸ ಜನ ಸೇವಾ ಸೌಹಾರ್ದ ಹಾಗೂ ಕಾಳಿದಾಸ ಸಹಕಾರಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕ ಶಿವಯೋಗಿ ಕುಂಬಾರ ಕಾರ್ಯಕ್ತಮವನ್ನು ನಿರೂಪಿಸಿ, ವಂದಿಸಿದರು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.