ಸಮಾವೇಶದ ಬಳಿ ವೈದ್ಯರ ತಂಡ

ಕೋಲಾರ, ಮೇ,೧- ತಾಲ್ಲೂಕಿನ ಕೆಂದಟ್ಟಿ ಸಮೀಪ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ೧೩ ವಿಧಾನಸಭಾ ಕ್ಷೇತ್ರಗಳ ಪ್ರಚಾರಕ್ಕಾಗಿ ೧೫೦ ಎಕರೆ ಪ್ರದೇಶದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಬರುವವರ ಆರೋಗ್ಯ ರಕ್ಷಣೆಗಾಗಿ ಕೋಲಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಎ.ವಿ.ನಾರಾಯಣಸ್ವಾಮಿ ನೇತೃತ್ವದ ತಂಡ ತಮ್ಮ ಸಿಬ್ಬಂದಿ,ವೈದ್ಯಕೀಯ ಸಲಕರಣೆಗಳೊಂದಿಗೆ ಸಮಾವೇಶದ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.