ಸಮೀಕ್ಷೆ ನಂಬಲ್ಲ: ಕೈಗೆ 141 ಸ್ಥಾನ

ಬೆಂಗಳೂರು,ಮೇ೧೨:ಮತಗಟ್ಟೆ ಸಮೀಕ್ಷೆಯ ಮೇಲೆ ನನಗೆ ನಂಬಿಕೆ ಇಲ್ಲ, ನನ್ನ ನಂಬಿಕೆ ಕಾಂಗ್ರೆಸ್ ಪಕ್ಷ ೧೪೧ ಸ್ಥಾನ ಗಳಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಬಹುಮತ ಬರುತ್ತದೆ. ಇದು ನನ್ನ ಅಚಲ ನಂಬಿಕೆ ಎಂದರು.
ಚುನಾವಣಾ ಸಂದರ್ಭದಲ್ಲಿ ಬಿಜೆಪಿಯವರು ಎಷ್ಟು ಬೇಕಾದರೂ ಹಣ ಸುರಿದಿರಬಹುದು. ಬಿಜೆಪಿಯ ಎಷ್ಟೇ ನಾಯಕರು ಬಂದು ಪ್ರಚಾರ ಮಾಡಿರಬಹುದು. ಆದರೆ, ಕಾಂಗ್ರೆಸ್‌ಗೆ ಬಹುಮತ ನಿಶ್ಚಿತ ಎಂದರು.
ಮತಗಟ್ಟೆ ಸಮೀಕ್ಷೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ವರದಿಗಳು ಬಂದಿವೆ. ಇದಕ್ಕೆ ನಾನು ಎಲ್ಲರಿಗೂ ಕೃತಜ್ಞತೆ ಹೇಳುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.