ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ

ಬಾದಾಮಿ, ಮಾ27: ತಾಲೂಕಿನ ನೀಲಗುಂದ ಗ್ರಾಮದಲ್ಲಿ ತಾಲೂಕಾ 8 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಕರವೀರಪ್ರಭು ಕ್ಯಾಲಕೊಂಡ ದಂಪತಿ, ಜಿಲ್ಲಾ ಕಸಾಪ ಅಧ್ಯಕ್ಷ ಶ್ರೀಶೈಲ ಕರಿಶಂಕರಿ, ತಾಲೂಕಾ ಕಸಾಪ ಅಧ್ಯಕ್ಷ ರವಿ ಕಂಗಳ ಇವರ ಎತ್ತಿನ ಬಂಡಿ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಗೆ ತಾ.ಪಂ. ಅಧ್ಯಕ್ಷೆ ರೇಖಾ ತಿರಕಪ್ಪನವರ ಚಾಲನೆ ನೀಡಿದರು.
ವಿವಿಧ ಕಲಾ, ವಾದ್ಯ ಮೇಳಗಳೊಂದಿಗೆ ಗ್ರಾಮದಲ್ಲಿ ಅದ್ದೂರಿಯಿಂದ ಗ್ರಾಮಸ್ಥರ ಪುಷ್ಪ ಅರ್ಪಣೆ ಮೂಲಕ ಗ್ರಾಮದ ಬಸ್ ನಿಲ್ದಾಣದಿಂದ ಆರಂಭಗೊಂಡು ಬೇವಿನಕಟ್ಟಿ, ಶಿವಪ್ಪಯ್ಯನಮಠ, ಮಲಕನ್ನವರ ಓಣಿಯ ಮೂಲಕ ಸಮ್ಮೇಳನದ ವೇದಿಕೆಗೆ ಆಗಮಿಸಿತು. ಈ ಸಂದರ್ಭದಲ್ಲಿ ಸಾಹಿತಿ ಶಂಭು ಬಳಿಗಾರ, ತಹಶೀಲ್ದಾರ್ ಸುಹಾಸ ಇಂಗಳೆ, ಕಸಾಪ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರು, ಗ್ರಾಮಸ್ಥರು, ಮಹಿಳೆಯರು ಉಪಸ್ಥಿತರಿದ್ದರು.