ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಕಾರ್ಯಕ್ರಮ

ಸೈದಾಪುರ:ಸೆ.21:ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2020-21 ಹಾಗೂ 2021-22ನೇ ಸಾಲಿನಲ್ಲಿ ಉತ್ತೀರ್ಣರಾದ ತರಬೇತಿದಾರರಿಗೆ ಘಟಿಕೋತ್ಸವ ಸಮಾರಂಭ ಜರುಗಿತು.
ಗ್ರಾ.ಪಂ.ಅಧ್ಯಕ್ಷ ಮಾಳಪ್ಪ ಅರಿಕೇರಿ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿ, ಘಟಿಕೋತ್ಸವ ಆಚರಣೆಯಿಂದ ತರಬೇತಿಯ ಮಹತ್ವ ಹೆಚ್ಚಾಗುತ್ತದೆ. ಕಲಿತದ್ದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಾಧನೆ ಮಾಡಿದಾಗ ಮಾತ್ರ ನಮ್ಮ ಹೆಚ್ಚಾಗುತ್ತದೆ. ನಿಮಗೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು.
ಗ್ರಾ.ಪಂ. ಉಪಾಧ್ಯಕ್ಷೆ ನೇತ್ರಾವತಿ ರಾಜು ದೊರೆ, ನಿತಿನ್‍ಕುಮಾರ್ ತಿವಾರಿ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಾಭಾರಿ ಪ್ರಾಚಾರ್ಯರಾದ ಕೆ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಕಿರಿಯ ತರಬೇತಿ ಅಧಿಕಾರಿಗಳಾದ ಒ.ಒ ಅತ್ತರ್, ಆಂಜನೇಯ, ನಜೀರ್ ಸೇರಿದಂತೆ ಇತರರಿದ್ದರು.