ಸರಗೂರು ಪಟ್ಟಣ ಪಂಚಾಯಿತಿ ಬಿಜೆಪಿ ಜಯಭೇರಿ

ಬೆಂಗಳೂರು.ಮಾ. ೩೧: ಮೈಸೂರು ಜಿಲ್ಲೆಯ ಸರಗೂರು ಪಟ್ಟಣ ಪಂಚಾಯಿತಿಯ ೧೨ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ೬ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಜೆಡಿಎಸ್‌ನ ೩ ಅಭ್ಯರ್ಥಿಗಳು, ಕಾಂಗ್ರೆಸ್‌ನ ಇಬ್ಬರು ಮತ್ತು ಒಬ್ಬ ಪಕ್ಷೇತರರು ಇಲ್ಲಿ ವಿಜೇತರಾಗಿದ್ದಾರೆ. ಇಲ್ಲಿ ಕಾಂಗ್ರೆಸ್ ಪಕ್ಷವು ೩ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದು ತೀವ್ರ ಮುಖಭಂಗ ಅನುಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಮೈಸೂರಿನ ಉಸ್ತುವಾರಿ ಸಚಿವರಾದ ಶ್ರೀ ಸೋಮಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು ಅವರ ಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಮೈಸೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀಮತಿ ಮಂಗಳಾ ಸೋಮಶೇಖರ್ ಮತ್ತು ತಾಲ್ಲೂಕು ಅಧ್ಯಕ್ಷರಾದ ಶ್ರೀ ಗುರುಸ್ವಾಮಿ ಅವರು ತಿಳಿಸಿದ್ದಾರೆ.