ಸರಣಿ ಅಪಘಾತ ಇಬ್ಬರು ಸಾವು

ಬೆಂಗಳೂರು, ನ.೧೯-ಓಮ್ನಿ ಕಾರ್ ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮುಂದೆ ಹೋಗುತ್ತಿದ್ದ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಓಮ್ನಿ ಕಾರ್ ಡಿಕ್ಕಿ ಹೊಡೆದಿದೆ.
ಅದರ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವೇಗವಾಗಿ ಓಮ್ನಿ ಕಾರು ಲಾರಿಗೆ ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.
ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.